ಗದಗ ಪೊಲೀಸರಿಂದ ಕಳೆದುಹೋದ 769 ಮೊಬೈಲ್ ಪತ್ತೆ
ಗದಗ, 10 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾ ಪೊಲೀಸ್ ಇಲಾಖೆ ಕಳೆದುಹೋದ ಹಾಗೂ ಕಳ್ಳತನವಾಗಿದ್ದ ಮೊಬೈಲ್ ಫೋನ್ಗಳನ್ನು ಪತ್ತೆ ಹಚ್ಚುವಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದು, ಒಟ್ಟು 769 ಮೊಬೈಲ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಗದಗ ಜಿಲ್ಲಾ ಪೊ
ಫೋಟೋ


ಗದಗ, 10 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾ ಪೊಲೀಸ್ ಇಲಾಖೆ ಕಳೆದುಹೋದ ಹಾಗೂ ಕಳ್ಳತನವಾಗಿದ್ದ ಮೊಬೈಲ್ ಫೋನ್ಗಳನ್ನು ಪತ್ತೆ ಹಚ್ಚುವಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದು, ಒಟ್ಟು 769 ಮೊಬೈಲ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 1 ಕೋಟಿ 13 ಲಕ್ಷ 79 ಸಾವಿರ 314 ರೂಪಾಯಿ ಮೌಲ್ಯದ 769 ಮೊಬೈಲ್ ಫೋನ್ಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಮಾಲೀಕರಿಗೆ ಮರಳಿಸಲಾಯಿತು.

ಗದಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಹಾಗೂ ಕಳ್ಳತನವಾಗಿದ್ದ ಮೊಬೈಲ್ಗಳನ್ನು ಸಿಇಐಆರ್ ತಂತ್ರಾಂಶದ ಸಹಾಯದಿಂದ ಪತ್ತೆ ಹಚ್ಚಲಾಗಿದೆ. 2026ರ ಜನವರಿ 1ರಿಂದ ಮೇ ತಿಂಗಳವರೆಗೆ ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಈ ಮೊಬೈಲ್ಗಳ ರಿಕವರಿ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಗದಗ ಎಸ್ಪಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಪಿ ರೋಹನ್ ಜಗದೀಶ ಅವರು ಸಾರ್ವಜನಿಕರಿಗೆ ಮೊಬೈಲ್ಗಳನ್ನು ವಿತರಿಸಿದರು. ಮೊಬೈಲ್ ಕಳೆದುಕೊಂಡಿದ್ದ ಅನೇಕರು ತಮ್ಮ ಸಾಧನಗಳು ಮರಳಿ ಸಿಗುವುದಿಲ್ಲ ಎಂದು ಭಾವಿಸಿದ್ದರು. ಆದರೆ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯಿಂದ ಮತ್ತೆ ಮೊಬೈಲ್ ಕೈ ಸೇರಿರುವುದು ಸಂತಸ ತಂದಿದೆ ಎಂದು ಹೇಳಿದರು.

ಮೊಬೈಲ್ ಮರಳಿ ಪಡೆದ ಯುವತಿಯೊಬ್ಬರು ಮಾತನಾಡಿ, “ಮೊಬೈಲ್ ಸಿಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಪೊಲೀಸರು ಪತ್ತೆಹಚ್ಚಿ ಕೊಟ್ಟಿದ್ದು ತುಂಬಾ ಸಂತೋಷ ತಂದಿದೆ” ಎಂದು ಹೇಳಿದರು.

ಮೊಬೈಲ್ ವಾರಸುದಾರರು ಪೊಲೀಸ್ ಇಲಾಖೆಯ ಕಾರ್ಯವನ್ನು ಶ್ಲಾಘಿಸಿ ಧನ್ಯವಾದ ಸಲ್ಲಿಸಿದರು. ಸಾರ್ವಜನಿಕರ ಕಳೆದುಹೋದ ವಸ್ತುಗಳನ್ನು ಪತ್ತೆಹಚ್ಚಲು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಎಸ್ಪಿ ರೋಹನ್ ಜಗದೀಶ ಮಾತನಾಡಿ, ಸಾರ್ವಜನಿಕರು ಮೊಬೈಲ್ ಕಳೆದುಹೋದ ತಕ್ಷಣವೇ ಪೊಲೀಸ್ ಠಾಣೆಗೆ ದೂರು ನೀಡಬೇಕು. ಸಿಇಐಆರ್ ತಂತ್ರಾಂಶದ ಮೂಲಕ ಮೊಬೈಲ್ಗಳನ್ನು ಪತ್ತೆಹಚ್ಚುವುದು ಸುಲಭವಾಗುತ್ತಿದೆ ಎಂದು ಹೇಳಿದರು.

ಒಟ್ಟಿನಲ್ಲಿ ಗದಗ ಜಿಲ್ಲಾ ಪೊಲೀಸರ ಈ ಕಾರ್ಯಾಚರಣೆ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದ್ದು, ಕಳೆದುಹೋದ ಮೊಬೈಲ್ಗಳನ್ನು ಮರಳಿ ಪಡೆಯುವ ಆಶಾಭಾವನೆ ಮೂಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande