ಬಾದಾಮಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಎರಡನೇ ಮಹಡಿ ನಿರ್ಮಾಣ
ಬಾಗಲಕೋಟೆ, 10 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿದ್ದು, ಕಾಲೇಜಿನ ಎರಡನೇ ಮಹಡಿ ನಿರ್ಮಾಣ ಕಾಮಗಾರಿಗೆ ಮೇ 11ರಂದು ಭೂಮಿಪೂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸುಮಾರು ರೂ.160.51 ಲಕ್ಷ ಅನುದಾನದ
ಉಢಟನೇ


ಬಾಗಲಕೋಟೆ, 10 ಮೇ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿದ್ದು, ಕಾಲೇಜಿನ ಎರಡನೇ ಮಹಡಿ ನಿರ್ಮಾಣ ಕಾಮಗಾರಿಗೆ ಮೇ 11ರಂದು ಭೂಮಿಪೂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಸುಮಾರು ರೂ.160.51 ಲಕ್ಷ ಅನುದಾನದ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಕಟ್ಟಡ ಕಾಮಗಾರಿಗೆ ಬಾದಾಮಿ ಮತಕ್ಷೇತ್ರದ ಶಾಸಕ ಭೀಮಸೇನ್ ಚಿಮ್ಮನಕಟ್ಟಿ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಶಾಸಕರ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಪಟ್ಟಣದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ಹೆಚ್ಚುವರಿ ಕೊಠಡಿಗಳು ಮತ್ತು ಮೂಲಸೌಕರ್ಯಗಳ ಅಗತ್ಯತೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜಿಗೆ ಎರಡನೇ ಮಹಡಿ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಮಂಜೂರಾಗಿದ್ದು, ಇದೀಗ ಕಾಮಗಾರಿಗೆ ಚಾಲನೆ ದೊರೆಯುತ್ತಿದೆ.

ನೂತನ ಕಟ್ಟಡ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ, ಹೆಚ್ಚುವರಿ ತರಗತಿ ಕೊಠಡಿಗಳು ಹಾಗೂ ಅಗತ್ಯ ಮೂಲಸೌಕರ್ಯ ಸೌಲಭ್ಯಗಳು ಲಭ್ಯವಾಗಲಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಇದು ಮತ್ತಷ್ಟು ಅನುಕೂಲವಾಗಲಿದೆ ಎಂದು ಶಿಕ್ಷಣಾಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಕಾಲೇಜಿನ ಅಭಿವೃದ್ಧಿಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ಕೈಗೊಂಡಿರುವ ಕ್ರಮವನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ.

ಶಾಸಕರ ಕಾರ್ಯಾಲಯದ ಪ್ರಕಟಣೆಯ ಪ್ರಕಾರ, ಶಿಕ್ಷಣ ಕ್ಷೇತ್ರದ ಬಲವರ್ಧನೆ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಇನ್ನಷ್ಟು ಸೌಲಭ್ಯಗಳನ್ನು ಕಲ್ಪಿಸುವ ಯೋಜನೆಯೂ ಇದೆ ಎಂದು ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande