
ಹುಬ್ಬಳ್ಳಿ, 10 ಮೇ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯ ತಾಲೂಕು ಆಡಳಿತ ಸೌಧದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತ್ಯೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಹೇಶ ಟೆಂಗಿನಕಾಯಿ ಅವರು ಭಾಗವಹಿಸಿ, ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದವರು, ಭಕ್ತಿ, ತ್ಯಾಗ ಮತ್ತು ಆದರ್ಶ ಜೀವನಕ್ಕೆ ಹೆಸರಾದ ಹೇಮರೆಡ್ಡಿ ಮಲ್ಲಮ್ಮನವರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿವೆ ಎಂದು ಅಭಿಪ್ರಾಯಪಟ್ಟರು. ಅವರ ಜೀವನ ಮೌಲ್ಯಗಳು ಯುವಪೀಳಿಗೆಗೆ ಮಾರ್ಗದರ್ಶಕವಾಗಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ನೀಲಮ್ಮ ತಾಯಿ ಅಸುಂಡಿ, ತಹಶೀಲ್ದಾರರಾದ ಸಿ.ಎಸ್. ಕುಲಕರ್ಣಿ, ಪ್ರಮುಖರಾದ ರಾಜು ಪಾಟೀಲ, ರಾಯಚಂದ್ರ ಹೊಸಮನಿ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa