
ಬೆಂಗಳೂರು, 10 ಮೇ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳ, ಆಸ್ಸಾಂ ಹಾಗೂ ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ದಾಖಲೆಯ ಜಯ ಸಾಧಿಸಿದ ಬಳಿಕ ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಬಿಜೆಪಿ ವತಿಯಿಂದ ಭಾನುವಾರ ಬೆಂಗಳೂರಿನಲ್ಲಿ ಭವ್ಯ ಸನ್ಮಾನ ಸಮಾರಂಭ ಆಯೋಜಿಸಲಾಯಿತು.
ನಗರದ ವಿಮಾನ ನಿಲ್ದಾಣದ ಸಮೀಪ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ಕೋರಿದರು. ಡೊಳ್ಳು–ಕುಣಿತ, ಜಯಘೋಷ ಹಾಗೂ ಕೇಸರಿ ಧ್ವಜಗಳ ನಡುವೆ ಪ್ರಧಾನಿ ಮೋದಿ ಅವರನ್ನು ನಾಯಕರು ಅಭಿನಂದಿಸಿದರು.
ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿಗೆ ಶಾಲು ಹೊದಿಸಿ ಸನ್ಮಾನಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ನಾಯಕರು, ಇತ್ತೀಚಿನ ವಿಧಾನಸಭಾ ಚುನಾವಣಾ ಫಲಿತಾಂಶಗಳು ಪ್ರಧಾನಿ ಮೋದಿಯವರ ನಾಯಕತ್ವದ ಮೇಲಿನ ಜನರ ವಿಶ್ವಾಸವನ್ನು ಮತ್ತೊಮ್ಮೆ ಸಾಬೀತುಪಡಿಸಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು.
ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಸಂಸದ ಪಿ.ಸಿ. ಮೋಹನ್ ಹಾಗೂ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa