
ಬೆಂಗಳೂರು, 10 ಮೇ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಜಯದ ಘೋಷಣೆ ಮೊಳಗಿಸಿ, ಅಸ್ಸಾಂ ಹಾಗೂ ಪುದುಚೇರಿ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಭರ್ಜರಿ ವಿಜಯ ಸಾಧಿಸಿದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಭವ್ಯ ಸ್ವಾಗತ ಹಾಗೂ ಸನ್ಮಾನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಅವರು ಪ್ರಧಾನ ಮಂತ್ರಿಯವರ ನಾಯಕತ್ವವನ್ನು ಶ್ಲಾಘಿಸಿದರು.
“ವಿಶ್ವ ವೇದಿಕೆಯಲ್ಲಿ ಭಾರತದ ಸಾಮರ್ಥ್ಯ, ಸಂಸ್ಕೃತಿ ಹಾಗೂ ಸ್ವಾಭಿಮಾನವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿರುವ ದೃಷ್ಟಿವಂತ ನಾಯಕತ್ವ ಪ್ರಧಾನಮಂತ್ರಿ ನರೇಂದ್ರ ಮೋದಿಯವರದ್ದು. ‘ವಿಕಸಿತ ಭಾರತ’ದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅವರು ದೇಶವನ್ನು ದಿಟ್ಟ ಹೆಜ್ಜೆಗಳಲ್ಲಿ ಮುನ್ನಡೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಜನತೆ ಮತ್ತೊಮ್ಮೆ ಅವರ ನಾಯಕತ್ವಕ್ಕೆ ಸ್ಪಷ್ಟವಾದ ಬೆಂಬಲದ ಮುದ್ರೆಯನ್ನು ಒತ್ತಿದ್ದಾರೆ” ಎಂದು ಅಶೋಕ ಅಭಿಪ್ರಾಯಪಟ್ಟರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa