ಅಭಿವೃದ್ಧಿ ಪರ ಕಾಮಗಾರಿಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ- ರವಿ ಬೋಸರಾಜು
ರಾಯಚೂರು, 10 ಮೇ (ಹಿ.ಸ.) : ಆ್ಯಂಕರ್ : ರಾಯಚೂರು ನಗರದ ವಿವಿಧ ಬಡಾವಣೆಗಳ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಹೆಚ್ಚಿನ ಅನುದಾನವನ್ನು ನೀಡಲಾಗುತ್ತಿದ್ದು. ಮಹಾನಗರ ಪಾಲಿಕೆ ಕೈಗೊಳ್ಳುವ ಅಭಿವೃದ್ಧಿಪರ ಕಾಮಗಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಮಹಿಳೆಯರು ಮನೆಯಿಂದಲೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ
Public cooperation is necessary for development works - Ravi Bosaraju


Public cooperation is necessary for development works - Ravi Bosaraju


Public cooperation is necessary for development works - Ravi Bosaraju


ರಾಯಚೂರು, 10 ಮೇ (ಹಿ.ಸ.) :

ಆ್ಯಂಕರ್ : ರಾಯಚೂರು ನಗರದ ವಿವಿಧ ಬಡಾವಣೆಗಳ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಹೆಚ್ಚಿನ ಅನುದಾನವನ್ನು ನೀಡಲಾಗುತ್ತಿದ್ದು. ಮಹಾನಗರ ಪಾಲಿಕೆ ಕೈಗೊಳ್ಳುವ ಅಭಿವೃದ್ಧಿಪರ ಕಾಮಗಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಮಹಿಳೆಯರು ಮನೆಯಿಂದಲೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ರೋಗರುಜನೆಗಳು ಹರಡದಂತೆ ಕಾಪಾಡಬೇಕು ಎಂದು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ತಿಳಿಸಿದರು.

ನಗರಸಭೆಯ ವತಿಯಿಂದ ವಾರ್ಡ ನಂ 31 ಸಿಯಾತಲಾಬ್ ಬಡಾವಣೆಯಲ್ಲಿ ರವಿ ಬೋಸರಾಜು ಅವರು ವಿವಿಧ ಅಭಿಪೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಬಡಾವಣೆಯ ಜನರೊಂದಿಗೆ ಸಮಸ್ಯೆ ಆಲಿಸಿದರು .

ಸಿಯಾತಲಾಬ್ ಬಡಾವಣೆಯಲ್ಲಿ ನಗರಸಭೆಯ ಸಿಬ್ಬಂದಿಗಳನ್ನು ಕರೆದು ಅಗತ್ಯವಿರುವಲ್ಲಿ ಹೆಚ್ಚಿನ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿ ಪೌರ ಕಾರ್ಮಿಕರಿಗೆ ಸ್ವಚ್ಛತೆಗಾಗಿ ಬೇಕಾದ ಉಪಕರಣಗಳ ಜೊತೆಗೆ ಕಾರ್ಮಿಕರಿಗೆ ಸಮವಸ್ತ್ರ, ಬೂಟ್, ಗ್ಲೌಸ್ ಸೇರಿದಂತೆ ಕಾರ್ಮಿಕ ಕಿಟ್ ಅಳವಡಿಸಿಕೊಳ್ಳಬೇಕು ಎಂದು ಪೌರ ಕಾರ್ಮಿಕರಿಗೆ ಜಾಗೃತಿ ಮೂಡಿಸಿದ.

ನಂತರ ಬಡಾವಣೆಯ ಜನರೊಂದಿಗೆ ಹಾಗೂ ಸರ್ಕಾರ ನೀಡುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಗ್ಗೆ ಮಾತನಾಡಿ ಸರ್ಕಾರ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳಾದ ಕುಡಿಯುವ ನೀರು, ಸಿಸಿ ರಸ್ತೆ, ಚರಂಡಿ, ಯುಜಿಡಿ ಬಗ್ಗೆ ಮಾಹಿತಿ ನೀಡಿ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನರಸಿಂಹಲು ಮಾಡಗಿರಿ, ನಗರಸಭೆ ಸದಸ್ಯರಾದ ಭೀಮರಾಯ, ವಿನೋದ್ ಕುಮಾರ್, ಮಾರಪ್ಪ, , ರವಿ ರಾಂಪೂರ್, ಪ್ರವೀಣ, ನಗರಸಭೆ ಪೌರ ಕಾರ್ಮಿಕರು, ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande