
ಬೆಳಗಾವಿ, 10 ಮೇ (ಹಿ.ಸ.) :
ಆ್ಯಂಕರ್ : ಹಿರಿಯ ಸಚಿವ ಡಿ.ಸುಧಾಕರ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಕಷ್ಟದಿಂದ ಮೇಲೆ ಬಂದಿದ್ದ ಸುಧಾಕರ ಅವರು ಅತ್ಯಂತ ಸರಳ, ಸಜ್ಜನರಾಗಿದ್ದರು. ಎಲ್ಲರೊಂದಿಗೆ ನಗು ನಗುತ್ತ ಮಾತನಾಡುತ್ತಿರುತ್ತಿದ್ದ ಸುಧಾಕರ ಅವರ ಅಕಾಲಿಕ ನಿಧನ ರಾಜ್ಯಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಧುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಣೆಯಲ್ಲಿ ಪ್ರಾರ್ಥಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa