
ನವದೆಹಲಿ, 10 ಮೇ (ಹಿ.ಸ.) :
ಆ್ಯಂಕರ್ : ತಮಿಳು ನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ನೀಡಿದ ಪ್ರಧಾನ ಮಂತ್ರಿ ಮೋದಿ ಅವರು, ತಮಿಳು ನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ವಿಜಯ್ ಅವರಿಗೆ ಶುಭ ಹಾರೈಸಿದ್ದಾರೆ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ ಯಶಸ್ಸು ದೊರಕಲಿ ಎಂದು ಅವರು ಹಾರೈಸಿದ್ದಾರೆ.
“ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು. ಜನರ ಜೀವನ ಮಟ್ಟವನ್ನು ಸುಧಾರಿಸಲು ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದೊಂದಿಗೆ ಸಹಕಾರ ಮುಂದುವರಿಸುತ್ತದೆ,” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa