ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣವಚನ ಸ್ವೀಕಾರ
ಚೆನೈ, 10 ಮೇ (ಹಿ.ಸ.) : ಆ್ಯಂಕರ್ : ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡಿದ್ದು, ಭಾನುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಚೆನ್ನೈನ ನೆಹರು ಒಳಾಂಗಣ ಕ್ರ
Oath ceremony


ಚೆನೈ, 10 ಮೇ (ಹಿ.ಸ.) :

ಆ್ಯಂಕರ್ : ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡಿದ್ದು, ಭಾನುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ವಿಜಯ್ ಅವರಿಗೆ ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಚಿತ್ರರಂಗದಿಂದ ರಾಜಕೀಯಕ್ಕೆ ಬಂದ ವಿಜಯ್ ಅವರ ಈ ಏರಿಕೆಯನ್ನು ಬೆಂಬಲಿಗರು “ತಮಿಳುನಾಡಿನ ರಾಜಕೀಯದಲ್ಲಿ ಹೊಸ ಯುಗ” ಎಂದು ಬಣ್ಣಿಸಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಚಿತ್ರರಂಗದ ಗಣ್ಯರು ಹಾಗೂ ಸಾವಿರಾರು ಟಿವಿಕೆ ಕಾರ್ಯಕರ್ತರು ಸಾಕ್ಷಿಯಾದರು. ಕಾರ್ಯಕ್ರಮದ ವೇಳೆ “ತಮಿಳುನಾಡಿಗೆ ಹೊಸ ದಿಕ್ಕು” ಎಂಬ ಘೋಷಣೆಗಳು ಮೊಳಗಿದವು.

9 ಮಂದಿಗೆ ಸಚಿವ ಸ್ಥಾನ

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ವಿಜಯ್ ಅವರು ತಮ್ಮ ಮೊದಲ ಸಂಪುಟವನ್ನು ಘೋಷಿಸಿದರು. ಒಟ್ಟು 9 ಮಂದಿಗೆ ಸಚಿವ ಸ್ಥಾನ ನೀಡಲಾಗಿದ್ದು, ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುತ್ತಿರುವ ವಿಸಿಕೆ, ಸಿಪಿಐ, ಸಿಪಿಎಂ ಹಾಗೂ ಮುಸ್ಲಿಂ ಲೀಗ್ ಪಕ್ಷಗಳ ಶಾಸಕರು ಸಂಪುಟ ಸೇರ್ಪಡೆಯಾಗಿಲ್ಲ.

ಉಪಮುಖ್ಯಮಂತ್ರಿ ಸ್ಥಾನಕ್ಕೆ ವಿಸಿಕೆ ಬೇಡಿಕೆ ಇಟ್ಟಿದೆ ಎಂಬ ಚರ್ಚೆಗಳು ನಡೆದಿದ್ದರೂ, ವಿಜಯ್ ಸರ್ಕಾರದಲ್ಲಿ ಸದ್ಯಕ್ಕೆ ಡಿಸಿಎಂ ಹುದ್ದೆ ಘೋಷಿಸಲಾಗಿಲ್ಲ.

ಪ್ರಮಾಣವಚನ ಸ್ವೀಕರಿಸಿದ ಸಚಿವರು

ಎನ್. ಆನಂದ್ – ಪಕ್ಷದ ಪ್ರಧಾನ ಕಾರ್ಯದರ್ಶಿ

ಆಧವ್ ಅರ್ಜುನ – ಚುನಾವಣಾ ಪ್ರಚಾರ ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ

ಕೆ.ಎ. ಸೆಂಗೊಟ್ಟೈಯನ್ – ಮಾಜಿ ಸಚಿವ ಹಾಗೂ ಕಾರ್ಯಕಾರಿ ಸಮಿತಿಯ ಮುಖ್ಯ ಸಂಯೋಜಕ

ಡಾ. ಕೆ.ಜಿ. ಅರುಣ್ರಾಜ್ – ನೀತಿ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ

ಪಿ. ವೆಂಕಟರಮಣನ್ – ಪಕ್ಷದ ಖಜಾಂಚಿ

ಸಿ.ಟಿ.ಆರ್. ನಿರ್ಮಲ್ ಕುಮಾರ್ – ಜಂಟಿ ಪ್ರಧಾನ ಕಾರ್ಯದರ್ಶಿ

ಎ. ರಾಜ್ಮೋಹನ್ – ಪ್ರಚಾರ ಕಾರ್ಯದರ್ಶಿ

ಡಾ. ಟಿ.ಕೆ. ಪ್ರಭು – ಸಚಿವ

ಸೆಲ್ವಿ ಎಸ್. ಕೀರ್ತನಾ – ಸಂಪುಟದ ಅತ್ಯಂತ ಕಿರಿಯ ಸಚಿವೆ

ಸಂಖ್ಯಾಬಲವೇನು?

ವಿಧಾನ ಸಭೆಯಲ್ಲಿ ಟಿವಿಕೆ ನೇತೃತ್ವದ ಮೈತ್ರಿಗೆ ಸ್ಪಷ್ಟ ಬಹುಮತ ಲಭ್ಯವಾಗಿದೆ. ಟಿವಿಕೆ 107 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 5, ಸಿಪಿಐ 2, ಸಿಪಿಎಂ 2, ವಿಸಿಕೆ 2 ಹಾಗೂ ಮುಸ್ಲಿಂ ಲೀಗ್ 2 ಶಾಸಕರ ಬೆಂಬಲ ಸರ್ಕಾರಕ್ಕಿದೆ.

ಈ ಹಿನ್ನೆಲೆಯಲ್ಲಿ ಒಟ್ಟು 120 ಶಾಸಕರ ಬೆಂಬಲದೊಂದಿಗೆ ವಿಜಯ್ ಸರ್ಕಾರ ಬಹುಮತ ಸಾಬೀತುಪಡಿಸಲು ಸಜ್ಜಾಗಿದೆ. ರಾಜ್ಯಪಾಲರು ಮೇ 13ರೊಳಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವಂತೆ ಸೂಚಿಸಿದ್ದು, ಹೊಸ ಸರ್ಕಾರದ ಮೊದಲ ಪರೀಕ್ಷೆ ಎದುರಾಗಲಿದೆ.

ಚಿತ್ರರಂಗದ ಸೂಪರ್ಸ್ಟಾರ್ ಆಗಿದ್ದ ವಿಜಯ್ ಇದೀಗ ರಾಜಕೀಯದ ಕೇಂದ್ರಬಿಂದುವಾಗಿದ್ದು, ತಮಿಳುನಾಡಿನ ಸಾಂಪ್ರದಾಯಿಕ ಡಿಎಂಕೆ–ಎಐಎಡಿಎಂಕೆ ರಾಜಕೀಯ ಸಮೀಕರಣಗಳಿಗೆ ಹೊಸ ಸವಾಲು ಎಸೆದಿದ್ದಾರೆ. ಹೊಸ ಸರ್ಕಾರ ಜನತೆಗೆ ನೀಡಿರುವ ಭರವಸೆಗಳನ್ನು ಹೇಗೆ ಜಾರಿಗೆ ತರುತ್ತದೆ ಎಂಬುದರತ್ತ ದೇಶದ ರಾಜಕೀಯ ವಲಯದ ಗಮನ ನೆಟ್ಟಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande