
ಕೋಲಾರ, ೧೧ ಮೇ (ಹಿ.ಸ) :
ಆ್ಯಂಕರ್ : ಜಿಲ್ಲೆಯಲ್ಲಿ ಇತ್ತೀಚೆಗೆ ಬಂದ0ತಹ ಅಕಾಲಿಕ ಮಳೆಯಿಂದಾಗಿ ಮಾವು ಬೆಳೆ ಸೇರಿದಂತೆ ತರಕಾರಿ ಬೆಳೆಗಳು ನಾಶವಾಗಿದ್ದು, ಕೂಡಲೇ ಜಿಲ್ಲಾಡಳಿತ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳೆ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಸರ್ವೆ ಕಾರ್ಯ ನಡೆಸಿ ಪರಿಹಾರ ನೀಡುವಂತೆ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾ ಅಧ್ಯಕ್ಷ ಸೀತಿಹೊಸೂರು ಮುರಳಿಗೌಡ ಒತ್ತಾಯಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಶ್ರೀನಿವಾಸಪುರ, ಕೆಜಿಎಫ್ ಮುಳಬಾಗಿಲು ಸೇರಿದಂತೆ ಇತರೆ ಭಾಗದಲ್ಲಿ ಅಕಾಲಿಕ ಆಲಿಕಲ್ಲು ಮಳೆಗೆ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಮಾವು ಮತ್ತು ತರಕಾರಿ ಬೆಳೆಗಳು ನೆಲಕ್ಕಚ್ಚಿ ಹಾನಿಗೊಳಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು
ಬಿಸಿಲಿನ ಧಗೆಯಿಂದ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಮಾವಿನ ಇಳುವರಿಯಲ್ಲಿ ತೀವ್ರ ಕುಸಿತ ಉಂಟಾಗಿದೆ ಅದರಲ್ಲೂ ಇಂತಹ ಅಕಾಲಿಕ ಮಳೆಯಿಂದ ಮತ್ತಷ್ಟು ಕಷ್ಟದಲ್ಲಿ ರೈತರು ಸಿಲುಕಿದ್ದಾರೆ ಉಷ್ಣಾಂಶ ಏರಿಕೆ, ಕೂಲಿ, ರಸಗೊಬ್ಬರ ದರ, ನಿರ್ವಹಣೆ ವೆಚ್ಚ ಹೆಚ್ಚಳದಿಂದ ನೊಂದಿರುವ ಮಾವು ಬೆಳೆಗಾರರಿಗೆ ಇಳುವರಿ ಕುಸಿತ ಅಕಾಲಿಕ ಮಳೆಯು ದೊಡ್ಡ ಹೊಡೆತ ನೀಡಿದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಶಿಫಾರಸಿನ ಮೇರೆಗೆ ತೋಟಗಾರಿಕೆ ಇಲಾಖೆಯು ನಷ್ಟದ ಅಂದಾಜು ಪರಿಶೀಲನೆಗೆ ಮುಂದಾಗಿ ಆಗಿರುವ ನಷ್ಟದ ಕುರಿತು ಸೂಕ್ತ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಬಿಡುಗಡೆ ಮಾಡಿ ರೈತರ ಕೈಹಿಡಿಯುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಕಷ್ಟ ಪಟ್ಟು ದುಡಿಮೆ ಮಾಡಿದ್ದ ರೈತನಿಗೆ ಫಸಲು ಇನ್ನೇನು ಕೈ ಸೇರಬೇಕು ಎನ್ನುವಷ್ಟರಲ್ಲಿ ಪ್ರಕೃತಿ ವಿಕೋಪ ಆಘಾತ ಉಂಟು ಮಾಡಿದೆ ಮಳೆ ಮುಂದುವರೆದರೇ, ಮತ್ತಷ್ಟು ನಷ್ಟ ಅನುಭವಿಸುವುದು ಖಚಿತವಾಗಿದೆ ವ್ಯವಸಾಯ ಮಾಡುವುದೇ ದುಸ್ತರವಾಗಿದೆ. ಸಾಲ ಮಾಡಿ ಬೆಳೆಗಳನ್ನು ಬೆಳೆದಿದ್ದರು ಉತ್ತಮ ಫಸಲು ಬಂದಿತ್ತು ರಾಜ್ಯ ಸರ್ಕಾರ ನಷ್ಟಹೊಂದಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸೀತಿಹೊಸೂರು ಮುರಳಿಗೌಡ ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್