
ಗದಗ, 11 ಮೇ (ಹಿ.ಸ.) :
ಆ್ಯಂಕರ್ : 2026-27 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ದಿನಾಂಕ: 01-07-2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಡೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ಗಾಗಿ ಕರೆಯಲಾಗುವುದು.
ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಮೊಬೈಲ್ ಸಂಖ್ಯೆ: 9916143619 ಕಛೇರಿ ದೂರವಾಣಿ ಸಂಖ್ಯೆ:08372-259664 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
ಅರ್ಜಿಗಳನ್ನು ಆನಲೈನ್ನಲ್ಲಿ ಲಿಂಕ್ ಮೂಲಕ ಡೌನಲೊಡ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನಾಂಕವಾಗಿರುತ್ತದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಮೊಬೈಲ್ ಸಂಖ್ಯೆ: 9845906227 ಕಛೇರಿ ದೂರವಾಣಿ ಸಂಖ್ಯೆ:08372-238649 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕರು ಹಾಗೂ ಜವಳಿ ಅಭಿವೃದ್ದಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP