
ಬಳ್ಳಾರಿ, 11 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗಿ ಯುವಕರಿಗಾಗಿ ಮೇ 14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಎಂ.ಜಿ ರಸ್ತೆಯ ಶಾಂತಿನಿಕೇತನ ಶಾಲೆಯ ಮುಂಭಾಗದ ಭಾರತ್ ಫೈನಾನ್ಷಿಯಲ್ ಇನ್ಕೂ÷್ಲಷನ್ ಲಿಮಿಟೆಡ್ ಕಚೇರಿಯಲ್ಲಿ ವಿಶೇಷ ನೇರ ಸಂದರ್ಶನ ಆಯೋಜಿಸಲಾಗಿದೆ.
ಇಂಡಸ್ ಇಂಡ್ ಬ್ಯಾಂಕ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಪಿಯುಸಿ ಅಥವಾ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವ-ವಿವರದ ಪ್ರತಿ, ಆಧಾರ್ ಕಾರ್ಡ್ ಪ್ರತಿ ಹಾಗೂ ದ್ವಿಚಕ್ರ ವಾಹನ ಕಡ್ಡಾಯವಾಗಿ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಬಳ್ಳಾರಿ ಅಥವಾ ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಸದಾವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್