ಮಸ್ಕಿ: ಡಿಪ್ಲೋಮಾ ಪ್ರವೇಶ - ಅರ್ಜಿ ಆಹ್ವಾನ
ಮಸ್ಕಿ, 11 ಮೇ (ಹಿ.ಸ.) : ಆ್ಯಂಕರ್ : ಮಸ್ಕಿಯ ಪ್ರತಾಪಗೌಡ ಪಾಟೀಲ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಸಾಲಿನ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಬೇಕೆಂದು ಕಾಲೇಜಿನ ಪ್ರಾಚಾ
ಮಸ್ಕಿ: ಡಿಪ್ಲೋಮಾ ಪ್ರವೇಶ - ಅರ್ಜಿ ಆಹ್ವಾನ


ಮಸ್ಕಿ, 11 ಮೇ (ಹಿ.ಸ.) :

ಆ್ಯಂಕರ್ : ಮಸ್ಕಿಯ ಪ್ರತಾಪಗೌಡ ಪಾಟೀಲ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಸಾಲಿನ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಬೇಕೆಂದು ಕಾಲೇಜಿನ ಪ್ರಾಚಾರ್ಯರು ಕೋರಿದ್ದಾರೆ.

ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿ0ಗ್ 60 ಸೀಟು, ಕ್ಲೌಡ್ ಕಂಪ್ಯೂಟಿ0ಗ್ 60 ಸೀಟು, ಸಿವಿಲ್ ಎಂಜಿನಿಯರಿ0ಗ್ 60 ಸೀಟು ಹಾಗೂ ಎಲೆಕ್ಟಿçಕಲ್ ಮತ್ತು ಎಲೆಕ್ಟಾçನಿಕ್ಸ್ ಎಂಜಿನಿಯರಿ0ಗ್ 60ಸೀಟುಗಳಿಗೆ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ, ಐಟಿಐ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹರಿದ್ದು, ಮೇ.16ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8197870539, 7676001433, 9686898908 ಅಥವಾ ಕಚೇರಿಯ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಮಸ್ಕಿ ಪ್ರತಾಪಗೌಡ ಪಾಟೀಲ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande