
ಬಾಗಲಕೋಟೆ, 11 ಮೇ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಬಾದಾಮಿಯಲ್ಲಿ ನೂತನ ಜೆಡಿಎಸ್ ಕಾರ್ಯಾಲಯವನ್ನು ಆರಂಭಿಸಲಾಗುತ್ತಿದ್ದು, ಅದರ ಉದ್ಘಾಟನಾ ಸಮಾರಂಭ ಸೋಮವಾರ ಮುಖ್ಯ ರಸ್ತೆಯ ಕೆನರಾ ಬ್ಯಾಂಕ್ ಹತ್ತಿರ ಆಯೋಜಿಸಲಾಯಿತು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹನಮಂತ ಮಾವಿನಮರದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ವಿವಿಧ ಘಟಕಗಳ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ನೂತನ ಕಾರ್ಯಾಲಯವು ಕ್ಷೇತ್ರದ ರಾಜಕೀಯ ಚಟುವಟಿಕೆಗಳಿಗೆ ಕೇಂದ್ರಬಿಂದುವಾಗಲಿದ್ದು, ಪಕ್ಷದ ಸಂಘಟನೆ ಮತ್ತು ಜನಸಂಪರ್ಕ ಕಾರ್ಯಗಳಿಗೆ ಹೆಚ್ಚಿನ ಚೈತನ್ಯ ನೀಡಲಿದೆ ಎಂದು ಪಕ್ಷದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ಕಾರ್ಯಾಲಯ ಉದ್ಘಾಟನೆಯ ಮೂಲಕ ಕ್ಷೇತ್ರದಲ್ಲಿ ಪಕ್ಷದ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸುವುದು ಹಾಗೂ ಗ್ರಾಮ ಮಟ್ಟದ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಉದ್ದೇಶ ಹೊಂದಲಾಗಿದೆ. ಮುಂಬರುವ ರಾಜಕೀಯ ಬೆಳವಣಿಗೆಗಳು ಹಾಗೂ ಸಂಘಟನಾ ಬಲವರ್ಧನೆ ದೃಷ್ಟಿಯಿಂದ ಈ ಕಾರ್ಯಾಲಯ ಮಹತ್ವ ಪಡೆದುಕೊಂಡಿದೆ ಎನ್ನಲಾಗುತ್ತಿದೆ.
ತಾಲೂಕು ಜೆಡಿಎಸ್ ಅಧ್ಯಕ್ಷ ಹುಚ್ಚಪ್ಪ ಹದ್ದನ್ನವರ ಪ್ರಕಟಣೆ ಮೂಲಕ ಮಾಹಿತಿ ನೀಡಿ, “ಮತಕ್ಷೇತ್ರದ ಎಲ್ಲಾ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.
ಈ ಕಾರ್ಯಕ್ರಮಕ್ಕೆ ಬಾದಾಮಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande