ಅಲ್ಪಸಂಖ್ಯಾತರ ಶೈಕ್ಷಣಿಕ ಸಾಲ ; ಅರ್ಜಿ ಆಹ್ವಾನ
ಕೊಪ್ಪಳ, 11 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2026-27ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಅಥವಾ ನೀಟ್
ಅಲ್ಪಸಂಖ್ಯಾತರ ಶೈಕ್ಷಣಿಕ ಸಾಲ ; ಅರ್ಜಿ ಆಹ್ವಾನ


ಕೊಪ್ಪಳ, 11 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2026-27ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಅಥವಾ ನೀಟ್ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್. ಬಿ.ಡಿ.ಎಸ್., ಬಿಇ, ಬಿಟೆಕ್, ಬಿ.ಆರ್ಕಿಟೇಕ್ಟರ್, ಬಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಇಂತಹ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಅರಿವು ಶೈಕ್ಷಣಿಕ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು (ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ) ನಿಗಮದ ವೆಬ್ಸೈಟ್ http://kmdconline.karnataka.gov.in ನಲ್ಲಿ ಆನ್ಲೈನ್ ಮುಖಾಂತರ ಮೇ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ನಿಗಮದ ವೆಬ್ಸೈಟ್ನಲ್ಲಿ ವಿಧ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ವಿಧ್ಯಾರ್ಥಿಗಳು ಮೂಲ ಇನ್ಡೆಂನಿಟಿ ಬಾಂಡ್ (INDEMNITY BOND) ಮತ್ತು ಸಾಲಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲಾತಿಗಳನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ 08539-225008 ಗೆ ಸಂಪರ್ಕಿಸುವಂತೆ ನಿಗದ ಕೆಎಂಡಿಸಿ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande