
ಹೊಸಕೋಟೆ, 11 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನಲ್ಲಿರುವ ತುಳಸಿ ಭವನ ರೆಸ್ಟೋರೆಂಟ್ ನಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ಬಳಸಲಾಗುತ್ತಿದೆ ಎಂಬ ಮಾಹಿತಿ ಮಕ್ಕಳ ಸಹಾಯವಾಣಿಗೆ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿದರು.
ತಪಾಸಣೆ ವೇಳೆ ಹೋಟೆಲ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ 01 ಬಾಲ ಕಾರ್ಮಿಕ ಹಾಗೂ 01 ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಭಾಗವಹಿಸಿದ್ದರು. ಬಾಲಕಾರ್ಮಿಕ ಪದ್ಧತಿಗೆ ತಡೆ ನೀಡಲು ಇಂತಹ ದಾಳಿಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa