‘ಸಖಿ’ ಒನ್ ಸ್ಟಾಪ್ ಕಾನೂನು ಸಲಹೆಗಾರರ ನೇಮಕಾತಿ
ಬಳ್ಳಾರಿ, 11 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ವೈದ್ಯಕೀಯ, ಪೊಲೀಸ್ ಸಹಾಯ, ಕಾನೂನು ನೆರವು, ಸಮಾಲೋಚನೆ ಹಾಗೂ ತಾತ್ಕಾಲಿಕ ವಸತಿ ಒಳಗೊಂಡು ಸಮಗ್ರ ಸೇವೆಗಳನ್ನು ನೀಡಲು ಅಗತ್ಯವಿರುವ ಇಬ್
‘ಸಖಿ’ ಒನ್ ಸ್ಟಾಪ್ ಕಾನೂನು ಸಲಹೆಗಾರರ ನೇಮಕಾತಿ


ಬಳ್ಳಾರಿ, 11 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ವೈದ್ಯಕೀಯ, ಪೊಲೀಸ್ ಸಹಾಯ, ಕಾನೂನು ನೆರವು, ಸಮಾಲೋಚನೆ ಹಾಗೂ ತಾತ್ಕಾಲಿಕ ವಸತಿ ಒಳಗೊಂಡು ಸಮಗ್ರ ಸೇವೆಗಳನ್ನು ನೀಡಲು ಅಗತ್ಯವಿರುವ ಇಬ್ಬರು ಕಾನೂನು ಸಲಹೆಗಾರರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ.

ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ವಾರದ 24*7 ಅವಧಿಯಲ್ಲಿ ಪಾಳಿ ಆಧಾರದ ಮೇಲೆ ಕೆಲಸ ನಿರ್ವಹಿಸಬೇಕಿರುತ್ತದೆ.

ಏ.27 ರಂದು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಹಾಗೂ ಸದಸ್ಯರ ನೇತೃತ್ವದಲ್ಲಿ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಒಟ್ಟು 7 ಅಭ್ಯರ್ಥಿಗಳು ಹಾಜರಿದ್ದು, ಇಬ್ಬರು ಅಭ್ಯರ್ಥಿಗಳು ಗೈರುಹಾಜರಾಗಿದ್ದರು. ಹಾಜರಿದ್ದ 7 ಅರ್ಹ ಅಭ್ಯರ್ಥಿಗಳಿಗೆ ಮುಂದಿನ ಹಂತದ ಸಂದರ್ಶನ ಪ್ರಕ್ರಿಯೆ ನಡೆಯಲಿದ್ದು, ಅದರ ದಿನಾಂಕವನ್ನು ಶೀಘ್ರದಲ್ಲೇ ಪ್ರತ್ಯೇಕವಾಗಿ ಪ್ರಕಟಿಸಲಾಗುವುದು.

ಆಯ್ಕೆಯ ಮಾನದಂಡಗಳು (ಒಟ್ಟು 100 ಅಂಕ) :

ಅಭ್ಯರ್ಥಿಗಳ ಆಯ್ಕೆಯನ್ನು ಈ ಕೆಳಕಂಡ ಪಾರದರ್ಶಕ ಮಾನದಂಡಗಳ ಆಧಾರದ ಮೇಲೆ ನಡೆಸಲಾಗುತ್ತದೆ. ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು-ಶೇ.65, ಕೆಲಸದ ಅನುಭವ ಪ್ರತಿ 2 ವರ್ಷಕ್ಕೆ 2 ಅಂಕಗಳ0ತೆ ಒಟ್ಟು 10, ಸಂವಹನ ಕೌಶಲ್ಯಗಳು-10 ಅಂಕ, ವಿಷಯ ಜ್ಞಾನ-10 ಅಂಕ ಹಾಗೂ ಕಾರ್ಯನಿರ್ವಹಣೆ -05 ಅಂಕ ಸೇರಿ ಒಟ್ಟು 100 ಅಂಕಗಳಿಗೆ ಸಂದರ್ಶನಕ್ಕೆ ಪರಿಗಣಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande