ರಾಜ್ಯದಲ್ಲಿ ಬಿಸಿಲು, ಗುಡುಗು-ಮಳೆ ಮುನ್ಸೂಚನೆ
ಉಂಟಾಗಿದೆ
Imd


ಬೆಂಗಳೂರು, 11 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದೂ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಾಹ್ನದ ನಂತರ ಹಲವೆಡೆ ಮೋಡ ಕವಿದ ವಾತಾವರಣ ಉಂಟಾಗುವ ಸಾಧ್ಯತೆಯೂ ಇದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆಗೆ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ.

ಬಿಸಿಲಿನ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ತೆರೆಯ ಪ್ರದೇಶಗಳಲ್ಲಿ ನಿಲ್ಲುವುದನ್ನು ತಪ್ಪಿಸಲು ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸಲಹೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande