ಛಲವಾದಿ ಸಮುದಾಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ವಿಜಯಪುರ, 11 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಛಲವಾದಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಉದ್ದೇಶದಿಂದ ಮೇ 24, 2026 ರಂದು ಬೆಳಿಗ್ಗೆ 11 ಗಂಟೆಗೆ
Snman


ವಿಜಯಪುರ, 11 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಛಲವಾದಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಉದ್ದೇಶದಿಂದ ಮೇ 24, 2026 ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ನಗರದ ಕಂದಗಲ್ ಶ್ರೀ ಹಣಮಂತ್ರಾಯ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಛಲವಾದಿ ನೌಕರ ಸಂಘ ಪ್ರಕಟಣೆ ಮೂಲಕ ತಿಳಿಸಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಸಮಾಜದ ಯುವಪೀಳಿಗೆಯಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜದ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ತ್ಯಾಗ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಸಮಾಜದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದತ್ತ ಹೆಚ್ಚಿನ ಆಸಕ್ತಿ ತೋರಬೇಕು. ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳೂ ಶೈಕ್ಷಣಿಕ ಸಾಧನೆಯ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು ಎಂಬ ಸಂದೇಶವನ್ನು ಈ ಕಾರ್ಯಕ್ರಮ ನೀಡಲಿದೆ ಎಂದು ಸಂಘಟಕರು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ಸಾಧಕರು ಹಾಗೂ ಗಣ್ಯರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದು, ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳು, ಉನ್ನತ ಶಿಕ್ಷಣದ ಅವಕಾಶಗಳು ಹಾಗೂ ವೃತ್ತಿ ಮಾರ್ಗದರ್ಶನ ಕುರಿತೂ ಮಾಹಿತಿ ಹಂಚಿಕೊಳ್ಳಲಾಗುತ್ತದೆ.

ಛಲವಾದಿ ಸಮುದಾಯದ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande