
ಬೆಂಗಳೂರು, 11 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪುಲಕೇಶಿನಗರದಲ್ಲಿ ಸಂಸದರ ಕ್ಷೇತ್ರಾಭಿವೃದ್ಧಿ ಅನುದಾನ (ಎಂಪಿಎಲ್ಎಡ್ಸ್) ಯೋಜನೆಯಡಿ 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ‘ಯೋಗ ಕೇಂದ್ರ’ವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ ಅವರು, ಯೋಗವು ಆರೋಗ್ಯಕರ ಜೀವನಶೈಲಿಗೆ ಮಹತ್ವದ ಸಾಧನವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸ್ಥಳೀಯ ನಿವಾಸಿಗಳಿಗೆ ಉತ್ತಮ ಆರೋಗ್ಯ ಮತ್ತು ಸಮುದಾಯ ಚಟುವಟಿಕೆಗಳಿಗೆ ಈ ಕೇಂದ್ರ ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಪುಲಕೇಶಿನಗರ ಮಂಡಲ ಅಧ್ಯಕ್ಷ ವಿ. ರವಿ, ಜಿಲ್ಲಾ ಕಾರ್ಯದರ್ಶಿ ಎಂ. ಕಲಾವತಿ, ಪುಲಕೇಶಿನಗರ ಯುವ ಮೋರ್ಚಾ ಅಧ್ಯಕ್ಷ ಕಿರಣ್, ಕುಶಾಲನಗರ ವಾರ್ಡ್ ಅಧ್ಯಕ್ಷ ವಿನೋದ್ ಹಾಗೂ ಕರ್ನಾಟಕ ಹಿಂದೂ ಮಹಾಸಭಾ ಅಧ್ಯಕ್ಷ ಶ್ರೀನಿವಾಸ ಸೇರಿದಂತೆ ಪಕ್ಷದ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa