ಆರ್ಥಿಕ ಅರಿವಿಲ್ಲದೆ ಮೋದಿ ವಿರುದ್ಧ ಟೀಕೆ ಮಾಡುವುದು ಕಾಂಗ್ರೆಸ್ ಚಾಳಿ : ಅಶೋಕ
ಬೆಂಗಳೂರು, 12 ಮೇ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹೆಗಳನ್ನು ಕಾಂಗ್ರೆಸ್ ನಾಯಕರು ಟೀಕಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, “ಕಾಂಗ್ರೆಸ್ ನಾಯಕರಿಗೆ ಆರ್ಥಿಕ ಜ್ಞಾನವೂ ಇಲ್ಲ, ಇತಿಹಾಸದ ಅರಿವೂ ಇಲ್ಲ” ಎಂದು ವಾಗ್ದಾಳಿ ನಡೆ
Ashok


ಬೆಂಗಳೂರು, 12 ಮೇ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹೆಗಳನ್ನು ಕಾಂಗ್ರೆಸ್ ನಾಯಕರು ಟೀಕಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, “ಕಾಂಗ್ರೆಸ್ ನಾಯಕರಿಗೆ ಆರ್ಥಿಕ ಜ್ಞಾನವೂ ಇಲ್ಲ, ಇತಿಹಾಸದ ಅರಿವೂ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಯೊಂದು ನಡೆಯನ್ನೂ ವಿರೋಧಿಸುವುದೇ ಕಾಂಗ್ರೆಸ್ ನಾಯಕರ ನಿತ್ಯ ಚಟುವಟಿಕೆಯಾಗಿಬಿಟ್ಟಿದೆ ಎಂದು ಟೀಕಿಸಿದ್ದಾರೆ.

೧೯೬೭ರಲ್ಲಿ ಆಗಿನ ಪ್ರಧಾನಮಂತ್ರಿ ಇಂದಿರಾ ಗಾಂಧಿ ದೇಶದ ಆರ್ಥಿಕ ಶಿಸ್ತಿಗಾಗಿ ಜನರು ಚಿನ್ನ ಖರೀದಿಸಬಾರದು ಎಂದು ಮನವಿ ಮಾಡಿದ್ದರು. ಇದೇ ರೀತಿ ೨೦೧೩ರಲ್ಲಿ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಆಗಿನ ಹಣಕಾಸು ಸಚಿವ ಪಿ.ಚಿದಂಬರಂ ಚಾಲ್ತಿ ಖಾತೆ ಕೊರತೆ ನಿಯಂತ್ರಿಸಲು ಜನರು ಚಿನ್ನದ ಮೇಲಿನ ವ್ಯಾಮೋಹ ಕಡಿಮೆ ಮಾಡಬೇಕು ಎಂದು ಹೇಳಿದ್ದರು ಎಂದು ಅಶೋಕ ನೆನಪಿಸಿದ್ದಾರೆ.

ಆದರೆ ಕಾಂಗ್ರೆಸ್ ಆಡಳಿತದ ಕಾಲದಲ್ಲಿ ನೀಡಿದ ಸಲಹೆಗಳನ್ನು “ಆರ್ಥಿಕ ನೀತಿ” ಎಂದು ಕೊಂಡಾಡಿದವರು, ಈಗ ಪ್ರಧಾನಿ ಮೋದಿ ರಾಷ್ಟ್ರದ ಹಿತದೃಷ್ಟಿಯಿಂದ ನೀಡುವ ಸಲಹೆಗಳನ್ನು ವಿರೋಧಿಸುತ್ತಿರುವುದು ದ್ವಂದ್ವ ನಿಲುವಿನ ಪರಾಕಾಷ್ಠೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜಕೀಯ ಕಾರಣಕ್ಕಾಗಿ ದೇಶದ ಆರ್ಥಿಕ ಹಿತಾಸಕ್ತಿಯನ್ನೇ ಕಡೆಗಣಿಸುವ ಕಾಂಗ್ರೆಸ್ ನಾಯಕರು ಮೊದಲು ಆರ್ಥಿಕತೆಯ ಮೂಲಭೂತ ಅರಿವು ಪಡೆದುಕೊಳ್ಳಬೇಕು ಎಂದು ಅಶೋಕ ತಿರುಗೇಟು ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande