
ಗುವಾಹಟಿ, 12 ಮೇ (ಹಿ.ಸ.) :
ಆ್ಯಂಕರ್ : ಅಸ್ಸಾಂ ರಾಜ್ಯದಲ್ಲಿ ಇಂದು ನೂತನ ಸರಕಾರ ಅಸ್ತಿತ್ವಕ್ಕೆ ಬರಲಿದ್ದು, ಹಾಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸೇರಿದಂತೆ ಐವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ತಮ್ಮೊಂದಿಗೆ ಇನ್ನೂ ನಾಲ್ವರು ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವವರಲ್ಲಿ ರಾಮೇಶ್ವರ್ ತೇಲಿ, ಅತುಲ್ ಬೋರಾ, ಚರಣ್ ಬೊಡೋ ಹಾಗೂ ಅಜಂತಾ ನಿಯೋಗ್ ಸೇರಿದ್ದಾರೆ.
ಇದೇ ವೇಳೆ ಶಾಸಕ ರಂಜಿತ್ ದಾಸ್ ಅವರನ್ನು ವಿಧಾನ ಸಭೆಯ ಸಭಾಧ್ಯಕ್ಷ ಸ್ಥಾನಕ್ಕೆ ಆಡಳಿತ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa