ಅಪರಾಧ ತಡೆಗೆ ಬೀಳಗಿ ಪೊಲೀಸರ ಕಟ್ಟೆಚ್ಚರ ; ರಾತ್ರಿ ವಿಶೇಷ ಗಸ್ತು ತೀವ್ರ
ಬಾಗಲಕೋಟೆ, 12 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಸರ್ವಜನಿಕರ ಸುರಕ್ಷತೆ ಹಾಗೂ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಬೀಳಗಿ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ಪ್ರತಿದಿನ ರಾತ್ರಿ ವಿಶೇಷ ಗಸ್ತು ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಅಧಿಕಾರಿ ಹಾಗೂ ಸಿಬ್ಬಂದಿಗಳು ರಾತ್ರಿ ವ
ಗಸ್ತು


ಬಾಗಲಕೋಟೆ, 12 ಮೇ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಸರ್ವಜನಿಕರ ಸುರಕ್ಷತೆ ಹಾಗೂ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಬೀಳಗಿ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ಪ್ರತಿದಿನ ರಾತ್ರಿ ವಿಶೇಷ ಗಸ್ತು ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಅಧಿಕಾರಿ ಹಾಗೂ ಸಿಬ್ಬಂದಿಗಳು ರಾತ್ರಿ ವೇಳೆಯಲ್ಲಿ ನಗರದ ವಿವಿಧ ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸುತ್ತಿದ್ದಾರೆ.

ನಗರದ ದೇವಸ್ಥಾನಗಳು, ಮಸೀದಿಗಳು, ಬಸ್ ನಿಲ್ದಾಣಗಳು, ಪೆಟ್ರೋಲ್ ಬಂಕ್ಗಳು ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಜೊತೆಗೆ ಎಟಿಎಂ ಕೇಂದ್ರಗಳ ಭದ್ರತೆ ಪರಿಶೀಲಿಸಿ, ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಈ ವೇಳೆ ರಾತ್ರಿ ಸಮಯದಲ್ಲಿ ಸಂಚರಿಸುತ್ತಿದ್ದ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸಿ, ದಾಖಲೆಗಳಿಲ್ಲದೆ ಸಂಚರಿಸುತ್ತಿದ್ದ ಕೆಲವು ವಾಹನಗಳನ್ನು ತಪಾಸಣೆ ಮಾಡಲಾಯಿತು. ಕಳ್ಳತನ, ದರೋಡೆ ಹಾಗೂ ಇತರೆ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಈ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ರಾತ್ರಿ ವೇಳೆಯಲ್ಲಿ ಪೊಲೀಸ್ ಗಸ್ತು ಹೆಚ್ಚಾಗಿರುವುದರಿಂದ ಭದ್ರತೆಯ ಭಾವನೆ ಮೂಡಿದೆ ಎಂದು ತಿಳಿಸಿದ್ದಾರೆ. ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಜ್ಜಾಗಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಜಿಲ್ಲೆಯ ವಿವಿಧ ಭಾಗಗಳಾದ ಬೀಳಗಿ, ಬಾಗಲಕೋಟೆ, ಮುಧೋಳ, ಬದಾಮಿ, ಹುನಗುಂದ, ಇಲಕಲ್ ಹಾಗೂ ಜಮಖಂಡಿ-ರಬಕವಿ ಬನಹಟ್ಟಿ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಅಪರಾಧ ತಡೆಗೆ ವಿಶೇಷ ನಿಗಾ ವಹಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande