ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಆಶಾಕಿರಣ : ಶಾಸಕ ವಿಠ್ಠಲ ಕಟಕದೊಂಡ
ಇದ್ದರು
ಸೈಕಲ್


ವಿಜಯಪುರ, 12 ಮೇ (ಹಿ.ಸ.) :

ಆಂಕರ್ : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ನೇರವಾಗಿ ಜನರನ್ನು ತಲುಪುತ್ತಿದ್ದು, ಬಡವರು, ದೀನ ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಆಶಾಕಿರಣವಾಗಿವೆ ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ್ ಕಟ್ಟಕಡೊಂಡ ಹೇಳಿದರು.

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 32 ವಿಕಲಚೇತನ ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರ ವಾಹನಗಳ ಕೀ ಹಸ್ತಾಂತರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಜನಪರ ಮತ್ತು ಜನಹಿತದ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಲಾಭವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಶುದ್ಧ ಹಾಗೂ ನಿಷ್ಕಲ್ಮಷ ಮನಸ್ಸಿನಿಂದ ಕೈಗೊಂಡ ಕಾರ್ಯಗಳಿಗೆ ಸದಾ ಉತ್ತಮ ಫಲ ಸಿಗುತ್ತದೆ. ಅದೇ ರೀತಿ ಸರ್ಕಾರವೂ ಜನರ ಹಿತದೃಷ್ಟಿಯಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವು ಇಂದು ರಾಜ್ಯದ ಲಕ್ಷಾಂತರ ಬಡ ಕುಟುಂಬಗಳಿಗೆ ವರದಾನವಾಗಿವೆ ಎಂದು ಹೇಳಿದರು.

ಸಂವಿಧಾನವು ಸಮಾಜದ ಪ್ರತಿಯೊಬ್ಬರ ಏಳಿಗೆಗೆ ವಿಶೇಷ ಅವಕಾಶ ಕಲ್ಪಿಸಿದ್ದು, ವಿಕಲಚೇತನರಿಗೂ ಅನೇಕ ಸೌಲಭ್ಯಗಳನ್ನು ನೀಡಿದೆ. ತ್ರಿಚಕ್ರ ವಾಹನ ವಿತರಣೆಯಂತಹ ಯೋಜನೆಗಳು ವಿಶೇಷಚೇತನರ ಬದುಕಿಗೆ ದೊಡ್ಡ ನೆರವಾಗಲಿದ್ದು, ಅವರ ದೈನಂದಿನ ಚಟುವಟಿಕೆಗಳಿಗೆ ಆಧಾರವಾಗಲಿದೆ ಎಂದು ಹೇಳಿದರು.

ಈ ವಾಹನಗಳು ವಿಕಲಚೇತನರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಸ್ವಾವಲಂಬಿ ಜೀವನ ನಡೆಸಲು ಪ್ರೇರಣೆ ನೀಡಲಿವೆ. ಇತರರನ್ನು ಅವಲಂಬಿಸದೇ ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳಲು ಸರ್ಕಾರದ ಯೋಜನೆಗಳು ಸಹಕಾರಿಯಾಗಬೇಕು ಎಂದು ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.

ವಿಕಲಚೇತನರ ಸಬಲೀಕರಣಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದ್ದು, ಶಾಸಕರ ಅನುದಾನದಡಿ ನಿಯಮಾನುಸಾರ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಮಾಡಲಾಗುತ್ತಿದೆ. ಸಾರ್ವಜನಿಕರು ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಚಡಚಣ ವಿಭಾಗದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರವಿದಾಸ ಜಾಧವ ಮಾತನಾಡಿ, ಕ್ಷೇತ್ರದ 32 ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿರುವುದು ಸಂತಸದ ವಿಷಯವಾಗಿದೆ. ಸರ್ಕಾರದಿಂದ ಮಾಸಾಶನ ಪಿಂಚಣಿ, ಬಸ್ ಪಾಸ್, ಉಚಿತ ಶಿಕ್ಷಣ ಸೇರಿದಂತೆ ವಿವಿಧ ಸೌಲಭ್ಯಗಳು ದೊರೆಯುತ್ತಿದ್ದು, ವಿಶೇಷಚೇತನರು ಅವುಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಸಾಧನೆ ಮಾಡಬೇಕು ಎಂದರು.

ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ವಿಜಯಪುರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ರಾಜಶೇಖರ್ ಅವಜಿ, ಪಾಲಿಕೆ ಸದಸ್ಯ ಶಫೀಕ್ ಮನಗೂಳಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಲಿಂ ಪೀರಜಾದೆ, ಸಂತೋಷ ಪಾಟೀಲ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande