
ಹರಪನಹಳ್ಳಿ, 12 ಮೇ (ಹಿ.ಸ.) :
ಆ್ಯಂಕರ್ : ಹರಪನಹಳ್ಳಿ ತಾಲ್ಲೂಕಿನ ಬಾಗಳಿ ಗ್ರಾಮದ ಬಿ ಮಲ್ಲಿಕಾರ್ಜುನ ತಂದೆ ಬಸವರಾಜ(24)
ವ್ಯಕ್ತಿ ಕಾಣೆಯಾಗಿದ್ದು, ಈ ಕುರಿತು ಮೇ 10ರಂದು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿz ಎಂದು ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.
.
ಕಾಣೆಯಾದ ಬಿ ಮಲ್ಲಿಕಾರ್ಜುನ ಸುಮಾರು 5.5 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ,ಎಡಕೆನ್ನೆಯ ಮೇಲೆ ಹಳೆಯ ಗಾಯದ ಗುರುತು ಹೊಂದಿದ್ದು ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುವರು.
ಈ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಹೊಸಪೇಟೆ ಕಂಟ್ರೋಲ್ ರೂಮ್ ಸಂಖ್ಯೆ: 9480805700, ಗ್ರಾಮೀಣ ಪೊಲೀಸ್ ಠಾಣೆ ದೂ.ಸಂ: 228233(08394) ಅಥವಾ ಪಿಐ ಗ್ರಾಮೀಣ ಪೊಲೀಸ್ ಠಾಣೆ ದೂ.ಸಂ:9480805746 ಗೆ ಸಂಪರ್ಕಿಸಬಹುದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್