ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಓರ್ವ ಸಾವು, ಇಬ್ಬರಿಗೆ ಗಾಯ
ಗದಗ, 12 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಎರಡು ಬೈಕ್ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ ಈ ದುರ್ಘಟನೆ ಸಂಭವಿಸಿದೆ.
ಫೋಟೋ


ಗದಗ, 12 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಎರಡು ಬೈಕ್ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ ಈ ದುರ್ಘಟನೆ ಸಂಭವಿಸಿದೆ.

ಮೃತ ಯುವಕನನ್ನು ಸುಯೇಬ್ (28) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಸ್ಥಳೀಯ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಸ್ಥಳೀಯರು ತಕ್ಷಣವೇ ಅವರನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಗಾಯಾಳುಗಳ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಮುಂಡರಗಿ ಪಿಎಸ್ಐ ಚನ್ನಯ್ಯ ದೇವೂರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತ ಸಂಭವಿಸಿದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.

ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande