ಕತಾರ್ ಕರ್ನಾಟಕ ಸಂಘದ ವತಿಯಿಂದ ತಾಯಂದಿರ ದಿನಾಚರಣೆ
ದೋಹಾ, 12 ಮೇ (ಹಿ.ಸ.) : ಆ್ಯಂಕರ್ : ಕತಾರ್ನಲ್ಲಿರುವ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಸಂಘ ಕತಾರ್ ವತಿಯಿಂದ 2026ರ ತಾಯಂದಿರ ದಿನವನ್ನು ಅತ್ಯಂತ ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಲಾಯಿತು. ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರ
Kathar mothers day


ದೋಹಾ, 12 ಮೇ (ಹಿ.ಸ.) :

ಆ್ಯಂಕರ್ : ಕತಾರ್ನಲ್ಲಿರುವ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಸಂಘ ಕತಾರ್ ವತಿಯಿಂದ 2026ರ ತಾಯಂದಿರ ದಿನವನ್ನು ಅತ್ಯಂತ ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಲಾಯಿತು. ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಾಯಕ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್, ದೋಹಾದ ವೈಬ್ರಂಟ್ ಇಂಡಸ್ಟ್ರಿಯಲ್ ಸೇಫ್ಟಿ ಟ್ರೈನಿಂಗ್ ಅಕಾಡೆಮಿಯಲ್ಲಿ “ಮಾತೃ ದೇವೋ ಭವ” ಥೀಮ್ನಡಿ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಕಾರ್ಯಕ್ರಮವು ಸಾಂಪ್ರದಾಯಿಕ ದೀಪ ಬೆಳಗುವ ಮೂಲಕ ಆರಂಭಗೊಂಡಿತು. ಬಳಿಕ ಶ್ರೀಮತಿ ಸಮನ್ವಿ ಅವರು “ಅಮ್ಮ ನಿನ್ನ ಎದೆಯಾಳ್ದಿನ್” ಹಾಡನ್ನು ಸುಮಧುರವಾಗಿ ಹಾಡಿ ಎಲ್ಲರ ಮನ ಗೆದ್ದರು. ಸಂಘದ ಉಪಾಧ್ಯಕ್ಷ ಅನಿಲ್ ಭಾಸಗಿ ಅವರು ಸ್ವಾಗತ ಭಾಷಣ ಮಾಡುತ್ತಾ, ತಾಯಂದಿರ ದಿನದ ಮಹತ್ವವನ್ನು ವಿವರಿಸಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು, ವಿದೇಶದಲ್ಲಿದ್ದರೂ ಕನ್ನಡ ಸಂಸ್ಕೃತಿ ಮತ್ತು ಕುಟುಂಬ ಮೌಲ್ಯಗಳನ್ನು ಉಳಿಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಸಮುದಾಯದ ಸದಸ್ಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಶ್ಲಾಘಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುರಸಭೆ ಸಚಿವಾಲಯದ ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕಿ ಡಾ. ಫೈಕಾ ಅಶ್ಕನಾನಿ ಅವರು, ತಾಯಂದಿರ ಪಾತ್ರ ಸಮಾಜ ನಿರ್ಮಾಣದಲ್ಲಿ ಅಪಾರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು. ಸಹ-ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ರಾಯಭಾರ ಕಚೇರಿಯ ಎರಡನೇ ಕಾರ್ಯದರ್ಶಿ ಶ್ರೀಮತಿ ಬಿಂದು ಎನ್. ನಾಯರ್ ಅವರು, ಭಾರತೀಯ ಸಂಸ್ಕೃತಿಯಲ್ಲಿ ತಾಯ್ತನದ ಮೌಲ್ಯ ಶಾಶ್ವತವಾದದ್ದು ಎಂದು ಹೇಳಿದರು.

ಅತಿಥಿಗಳಾಗಿ ಭಾಗವಹಿಸಿದ್ದ ಡಾ. ರೋಹಿಣಿ ಪುಟ್ಟೇಗೌಡ ಹಾಗೂ ಶ್ರೀಮತಿ ಹಮೀದಾ ಖಾದರ್ ಅವರು ಆರೋಗ್ಯ, ಶಿಕ್ಷಣ ಮತ್ತು ಯೋಗಕ್ಷೇಮ ಕುರಿತಾಗಿ ಉಪಯುಕ್ತ ವಿಚಾರಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಐಸಿಸಿ ಉಪಾಧ್ಯಕ್ಷ ಶಾಂತನು ದೇಶಪಾಂಡೆ, ಐಸಿಬಿಎಫ್ ಪ್ರಧಾನ ಕಾರ್ಯದರ್ಶಿ ದೀಪಕ್ ಶೆಟ್ಟಿ, ಸಲಹೆಗಾರರಾದ ಅರುಣ್ಕುಮಾರ್, ವೀರೇಶ್ ಮನ್ನಂಗಿ, ಡಾ. ಸಂಜಯ್ ಕುದರಿ ಹಾಗೂ ಐಸಿಸಿ ಮಾಜಿ ಅಧ್ಯಕ್ಷೆ ಶ್ರೀಮತಿ ಮಿಲನ್ ಅರುಣ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರು ಮತ್ತು ಕುಟುಂಬ ಸದಸ್ಯರಿಗಾಗಿ ವಿವಿಧ ಮನರಂಜನಾ ಆಟಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು,

ಕಾರ್ಯಕ್ರಮದ ಕೊನೆಯಲ್ಲಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಭಾವನಾ ವಂದನಾರ್ಪಣೆ ಸಲ್ಲಿಸಿದರು. ನಂತರ ಕೇಕ್ ಕತ್ತರಿಸುವ ಮೂಲಕ ತಾಯಂದಿರ ದಿನಾಚರಣೆಯನ್ನು ಭಾವನಾತ್ಮಕ ಅಚರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande