ರಾಯಚೂರು : ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ರಾಯಚೂರು , 12 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಮುಸ್ಲಿಂ, ಜೈನ್, ಸಿಖ್ಖ್, ಪಾರ್ಸಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರಿವು ಸಿಇಟಿ/ ನೀಟ್ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ
ರಾಯಚೂರು : ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ


ರಾಯಚೂರು , 12 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಮುಸ್ಲಿಂ, ಜೈನ್, ಸಿಖ್ಖ್, ಪಾರ್ಸಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರಿವು ಸಿಇಟಿ/ ನೀಟ್ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾದಿಕಾರದಿಂದ ಸಿಇಟಿ/ ನೀಟ್ ಮುಂಖಾತರ ಎಂ.ಬಿ.ಬಿ.ಎಸ್/ಬಿ.ಡಿ.ಎಸ್./ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ ಬ್ಯಾಚುಲರ್ ಆಫ್ ಟೆಕ್ನಾಲಜಿ/ ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಇಂತಹ ಕೋರ್ಸಗಳಿಗೆ ಅಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುವುದು, ಆಸಕ್ತ ವಿದ್ಯಾರ್ಥಿಗಳು ದಿನಾಂಕ: 30-05-2026ರೊಳಗಾಗಿ ಆನ್ಲೈನ್ ನಿಗಮದ ವೆಬ್ಸೈಟ್ ವಿಳಾಸ: http://kmdconline.karnataka.gov.in ಗೆ ಲಿಂಕ್ಗೆ ಕ್ಲಿಕ್ ಮಾಡಬೇಕು. ನಂತರ ಅರ್ಜಿಯನ್ನು ತುಂಬಿ ನೇರವಾಗಿ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ನಂ.12-11-49,1 ನೇ ಮಹಡಿ ಅಮೀರ ಟ್ರೇಡಿಂಗ್ ಕಾಂಪ್ಲೆಕ್ಸ್, ಅರಬ್ ಮೋಹಲ್ಲಾ ರಾಯಚೂರು ದೂರವಾಣಿ ಸಂಖ್ಯೆ: 08532 250825ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande