
ರಾಯಚೂರು , 12 ಮೇ (ಹಿ.ಸ.) :
ಆ್ಯಂಕರ್ : ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಸರ್ವೋಚ್ಚ ನ್ಯಾಯಾಲಯವು ಸಮಾಧಾನ್ ಸಮರೋಹ್ ಎನ್ನುವ ವಿಶೇಷ ಲೋಕಾ ಅದಾಲತ್ ಅನ್ನು 2026ರ ಆಗಸ್ಟ್ 21 ರಿಂದ 23ರವರೆಗೆ ಆಯೋಜಿಸಲಾಗಿದೆ ಎಂದು ಪ್ರಧಾನ ಹಿರಿಯ ವ್ಯವಹಾರ ನ್ಯಾಯಾಧೀಶರು ಮತ್ತು ಮು.ನ್ಯಾ.ದಂ.ಗಳು, ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿಗಳಾದ ಸಿದ್ಧರಾಮಪ್ಪ ಕಲ್ಯಾಣರಾವ್ ಅವರು ತಿಳಿಸಿದ್ದಾರೆ.
ವಿಶೇಷ ಲೋಕ್ ಅದಾಲತ್ ಅನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ನಿವಾರಣೆ ಮಾಡುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳ ನ್ಯಾಯಾಧೀಶರೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವಿಡಿಯೋ ಕಾನ್ಸರೆನ್ಸ್ ಮೂಲಕ ನಡೆದ ಈ ಮಹತ್ವದ ಸಭೆಯಲ್ಲಿ ಸುಪ್ರೀಂಕೋರ್ಟ್ ನ ಮಾರ್ಗದರ್ಶನದಂತೆ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿ ಕುರಿತು ಚರ್ಚೆ ನಡೆಸಲಾಯಿತು.
ಈ ವೇಳೆ ಕರ್ನಾಟಕದ ನಾನಾ ಜಿಲ್ಲೆಗಳ ನ್ಯಾಯಾಧೀಶರು ಭಾಗವಹಿಸಿ, ತಮ್ಮ ತಮ್ಮ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸ್ಥಿತಿಗತಿ ಹಾಗೂ ಪರಿಹಾರ ಕ್ರಮಗಳ ಬಗ್ಗೆ ವಿವರಿಸಿದರು. ಅಧಿಕಾರಿಗಳು, ಪ್ರಕರಣಗಳನ್ನು ನ್ಯಾಯಾಲಯದ ಹೊರಗಡೆಯೇ ಪರಸ್ಪರ ಸಮಾಧಾನದಿಂದ (ರಾಜಿ) ಬಗೆಹರಿಸುವ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ನ್ಯಾಯಾಲಯಗಳ ಮೇಲಿನ ಭಾರ ಕಡಿಮೆಯಾಗುವುದಲ್ಲದೆ, ಸಾರ್ವಜನಿಕರಿಗೆ ಕಡಿಮೆ ಅವಧಿಯಲ್ಲಿ ನ್ಯಾಯ ದೊರಕಲು ಸಹಕಾರಿ ಆಗಲಿದೆ. ಈ ಸಭೆಯು ನ್ಯಾಯಾಂಗ ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಜನಸ್ನೇಹಿಯಾಗಿಸಲು ಒಂದು ಪ್ರಮುಖ ಹೆಜ್ಜೆಯಾಗಿದ್ದು, ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ನಿವಾರಣೆಗೆ ಹೊಸ ದಿಕ್ಕು ತೋರಿಸಲಿದ್ದು, ಎಲ್ಲಾ ವಕೀಲರು, ಕಕ್ಷಿದಾರರು, ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ ಬಗೆಯ ಕೇಸುಗಳನ್ನು ವಿಶೇಷ ಲೋಕ ಅದಾಲತ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿಗಳಾದ ಸಿದ್ಧರಾಮಪ್ಪ ಕಲ್ಯಾಣರಾವ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್