
ಬೆಂಗಳೂರು, 12 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಧ್ಯಾಹ್ನದ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಉಂಟಾಗುವ ಸಾಧ್ಯತೆಯಿದ್ದು, ಕೆಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಬೀಸುವ ಸಾಧ್ಯತೆ ಇದೆ.
ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ವಿಶೇಷವಾಗಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು ಮತ್ತು ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa