ಇಂಡಿ ಕ್ಷೇತ್ರಕ್ಕೆ ಶಿಕ್ಷಣದ ಹೊಸ ಬೆಳಕು ; ಮೂರು ಪದವಿಪೂರ್ವ ಕಾಲೇಜುಗಳಿಗೆ ಮಂಜೂರು
ವಿಜಯಪುರ, 12 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಬಸನಾಳ, ಹಡಲಸಂಗ ಹಾಗೂ ಶಿರಶ್ಯಾಡ ಗ್ರಾಮಗಳಿಗೆ ಮೂರು ಹೊಸ ಪದವಿಪೂರ್ವ ಕಾಲೇಜುಗಳು ಮಂಜೂರಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನತೆ ಹಾಗೂ ವಿದ್ಯಾರ್ಥಿಗಳಲ್ಲಿ ಸಂತಸ ಮನೆ ಮಾಡಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ
ಅಭಿನಂದನೆ


ವಿಜಯಪುರ, 12 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಬಸನಾಳ, ಹಡಲಸಂಗ ಹಾಗೂ ಶಿರಶ್ಯಾಡ ಗ್ರಾಮಗಳಿಗೆ ಮೂರು ಹೊಸ ಪದವಿಪೂರ್ವ ಕಾಲೇಜುಗಳು ಮಂಜೂರಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನತೆ ಹಾಗೂ ವಿದ್ಯಾರ್ಥಿಗಳಲ್ಲಿ ಸಂತಸ ಮನೆ ಮಾಡಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕೈಗೊಳ್ಳಲಾದ ಈ ಮಹತ್ವದ ಕ್ರಮಕ್ಕೆ ಶಿಕ್ಷಣ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಉಪನ್ಯಾಸಕರು ಶಾಸಕ ಯಶವಂತರಾಯಗೌಡ ಪಟೇಲ್ ಅವರನಿವಾಸಕ್ಕೆ ಭೇಟಿ ನೀಡಿ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಕಾಲೇಜುಗಳ ಮಂಜೂರಾತಿಗೆ ಕೈಗೊಂಡ ಪ್ರಯತ್ನ ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.

ಇಲ್ಲಿಯವರೆಗೆ ಪದವಿಪೂರ್ವ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ದೂರದ ಪಟ್ಟಣಗಳಿಗೆ ತೆರಳಬೇಕಾದ ಅನಿವಾರ್ಯತೆ ಇತ್ತು. ವಿಶೇಷವಾಗಿ ಗ್ರಾಮೀಣ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಇದು ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಉಂಟುಮಾಡುತ್ತಿತ್ತು. ಇದೀಗ ಸ್ಥಳೀಯ ಮಟ್ಟದಲ್ಲೇ ಕಾಲೇಜುಗಳು ಆರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಹೊಸ ಕಾಲೇಜುಗಳ ಸ್ಥಾಪನೆಯಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೂ ಉತ್ತೇಜನ ಸಿಗಲಿದ್ದು, ಶಿಕ್ಷಣ ಮಧ್ಯೆ ನಿಲ್ಲಿಸುವ ಪ್ರಮಾಣ ಕಡಿಮೆಯಾಗಲಿದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣದ ಜೊತೆಗೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೂ ಇದು ಸಹಕಾರಿಯಾಗಲಿದೆ.

ಈ ಸಂದರ್ಭದಲ್ಲಿ ಮಾತನಾಡಿ ಶಾಸಕರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಒದಗಿಸುವುದು ಮುಖ್ಯ ಗುರಿಯಾಗಿದ್ದು, ಮುಂದೆಯೂ ಕ್ಷೇತ್ರದ ಅಭಿವೃದ್ಧಿಗೆ ಜನರ ಸಹಕಾರದೊಂದಿಗೆ ಕಾರ್ಯ ಮುಂದುವರಿಸಲಾಗುವುದು ಎಂದು ತಿಳಿಸಲಾಯಿತು. ಅಭಿನಂದನೆ ಸಲ್ಲಿಸಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರಿಗೆ ಕೃತಜ್ಞತೆ ಸಲ್ಲಿಸಿ, ಅವರ ಪ್ರೀತಿ ಹಾಗೂ ಅಭಿಮಾನಕ್ಕೆ ಧನ್ಯವಾದಗಳನ್ನು ತಿಳಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande