
ಹುಬ್ಬಳ್ಳಿ, 12 ಮೇ (ಹಿ.ಸ.) :
ಆ್ಯಂಕರ್ : ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಹುಬ್ಬಳ್ಳಿ ಜನತೆಗೆ ಮಂಗಳವಾರ ಸಂಜೆ ಸುರಿದ ಮಳೆ ತಂಪಿನ ಅನುಭವ ನೀಡಿತು. ಮಧ್ಯಾಹ್ನದವರೆಗೂ ಉರಿಬಿಸಿಲಿನಿಂದ ಕಂಗಾಲಾಗಿದ್ದ ನಗರದಲ್ಲಿ ಸಂಜೆ ವೇಳೆಗೆ ಮೋಡ ಕವಿದು, ಬಳಿಕ ಗುಡುಗು-ಮಿಂಚಿನೊಂದಿಗೆ ಸುಮಾರು ಒಂದು ಘಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ವಾತಾವರಣ ಸಂಪೂರ್ಣ ತಂಪಾಯಿತು.
ನಗರದ ಗೋಕುಲ ರಸ್ತೆ, ಕೇಶ್ವಾಪುರ, ವಿದ್ಯಾನಗರ, ಹೊಸೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಜನರು ಬಿಸಿಲಿನ ಬೇಗೆಯಿಂದ ಕೆಲಕಾಲ ನಿರಾಳರಾ. ಮಳೆಯ ಆರಂಭವಾಗುತ್ತಿದ್ದಂತೆಯೇ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಂಡು ಬಂದಿತು.
ಕಳೆದ ಒಂದು ವಾರದಿಂದ ಉಷ್ಣಾಂಶ ಏರಿಕೆಯಿಂದ ಜನಜೀವನ ತತ್ತರಿಸಿತ್ತು. ಮಧ್ಯಾಹ್ನ ವೇಳೆಯಲ್ಲಿ ರಸ್ತೆಗಳು ಬಿಕೋ ಎನ್ನುತ್ತಿದ್ದವು. ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಬಿಸಿಗಾಳಿಯಿಂದ ಸಂಕಷ್ಟ ಅನುಭವಿಸುತ್ತಿದ್ದರು. ಈ ನಡುವೆಯೇ ಸುರಿದ ಮಳೆ ಜನರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಮಳೆಯ ಪರಿಣಾಮವಾಗಿ ನಗರದಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದ್ದು, ತಂಪಾದ ಗಾಳಿ ಬೀಸತೊಡಗಿದೆ. ಕೆಲ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa