ಬಳ್ಳಾರಿ : ಮುಂದುವರೆದ ಸರ್ಕಾರಿ ಜಮೀನು ಒತ್ತುವರಿ ತೆರವು
ಬಳ್ಳಾರಿ, 13 ಮೇ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಬಳ್ಳಾರಿ (ಗ್ರಾಮೀಣ) ವ್ಯಾಪ್ತಿಯಲ್ಲಿ ಬರುವ ಬೆಲೆಬಾಳುವ ಸರ್ಕಾರಿ ಜಮೀನುಗಳನ್ನು ಸಂರಕ್ಷಿಸುವ ಕಾರ್ಯ ಜಿಲ್ಲಾಡಳಿತದಿಂದ ಬುಧವಾರವೂ ಮುಂದುವರೆಯಿತು. ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಭುವನಗಿರಿ ಕಾಲೋನಿಯ ಅಶೋಕ್ ನಗರದ ಸರ್ವೆ ನಂಬರ್ 348 ರಲ್ಲಿನ ಒಟ
ಬಳ್ಳಾರಿ: ಮುಂದುವರೆದ ಸರ್ಕಾರಿ ಜಮೀನು ಒತ್ತುವರಿ ತೆರವು


ಬಳ್ಳಾರಿ: ಮುಂದುವರೆದ ಸರ್ಕಾರಿ ಜಮೀನು ಒತ್ತುವರಿ ತೆರವು


ಬಳ್ಳಾರಿ, 13 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಬಳ್ಳಾರಿ (ಗ್ರಾಮೀಣ) ವ್ಯಾಪ್ತಿಯಲ್ಲಿ ಬರುವ ಬೆಲೆಬಾಳುವ ಸರ್ಕಾರಿ ಜಮೀನುಗಳನ್ನು ಸಂರಕ್ಷಿಸುವ ಕಾರ್ಯ ಜಿಲ್ಲಾಡಳಿತದಿಂದ ಬುಧವಾರವೂ ಮುಂದುವರೆಯಿತು.

ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಭುವನಗಿರಿ ಕಾಲೋನಿಯ ಅಶೋಕ್ ನಗರದ ಸರ್ವೆ ನಂಬರ್ 348 ರಲ್ಲಿನ ಒಟ್ಟು 11.59 ಎಕರೆ ಜಮೀನು ಕರ್ನಾಟಕ ಸರ್ಕಾರದ ಸ್ವತ್ತಾಗಿದ್ದು, ಬುಧವಾರ ಸ್ಥಳದಲ್ಲಿ ಜೆಸಿಬಿ ಯಂತ್ರಗಳ ಮೂಲಕ ಜಾಗವನ್ನು ಸಮತಟ್ಟುಗೊಳಿಸುವ ಮೂಲಕ ಗುರುತಿಸುವ ಕಾರ್ಯ ನಡೆಯಿತು.

ಒತ್ತುವರಿದಾರರಿಗೆ ಎಚ್ಚರಿಕೆ ನೀಡುವ ಫಲಕವನ್ನು ವಿವಾದಿತ ಸ್ಥಳದಲ್ಲಿ ಅಳವಡಿಸುವ ಮೂಲಕ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ನಾಮಫಲಕದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಕಠಿಣ ಕಾನೂನು ಕ್ರಮದ ಎಚ್ಚರಿಕೆ :

ಸರ್ಕಾರಿ ಜಮೀನುಗಳನ್ನು ಯಾರಾದರೂ ಒತ್ತುವರಿ ಮಾಡಿಕೊಂಡಲ್ಲಿ ಅಥವಾ ಅನಧಿಕೃತವಾಗಿ ಬಳಕೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಇಂತಹ ಜಾಗಗಳ ಬಗ್ಗೆ ಜಾಗರೂಕರಾಗಿರಬೇಕು ಮತ್ತು ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ತೆರವು ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಹಾಗೂ ಕಂದಾಯ, ಪೊಲೀಸ್ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande