ಬೀದರ್ ನಲ್ಲಿ ₹36 ಕೋಟಿ ವೆಚ್ಚದ ಕಿದ್ವಾಯಿ ಕ್ಯಾನ್ಸರ್ ಚಿಕಿತ್ಸಾ ಘಟಕಕ್ಕೆ ಶಂಕುಸ್ಥಾಪನೆ
ಬೀದರ್, 13 ಮೇ (ಹಿ.ಸ.) : ಆ್ಯಂಕರ್ : ಸಚಿವ ಈಶ್ವರ ಖಂಡ್ರೆ ಅವರು ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಆವರಣದಲ್ಲಿ ಸುಮಾರು ₹36 ಕೋಟಿ ಅನುದಾನದಡಿ ನಿರ್ಮಾಣಗೊಳ್ಳಲಿರುವ 100 ಹಾಸಿಗೆಗಳ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದ
ಶಂಕುಸ್ಥಾಪನೆ


ಬೀದರ್, 13 ಮೇ (ಹಿ.ಸ.) :

ಆ್ಯಂಕರ್ : ಸಚಿವ ಈಶ್ವರ ಖಂಡ್ರೆ ಅವರು ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಆವರಣದಲ್ಲಿ ಸುಮಾರು ₹36 ಕೋಟಿ ಅನುದಾನದಡಿ ನಿರ್ಮಾಣಗೊಳ್ಳಲಿರುವ 100 ಹಾಸಿಗೆಗಳ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಯಾನ್ಸರ್ ಅಪಾಯಕಾರಿ ಕಾಯಿಲೆಯಾಗಿದ್ದರೂ ಆರಂಭಿಕ ಹಂತದಲ್ಲೇ ಪತ್ತೆ ಮಾಡಿದರೆ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಗುಟ್ಕಾ ಮತ್ತು ತಂಬಾಕು ಸೇವನೆಯ ಪರಿಣಾಮವಾಗಿ ಬಾಯಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದ್ದು, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಮಾಣವೂ ಏರಿಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

“ಚಿಕಿತ್ಸೆಗಿಂತ ಮುನ್ನೆಚ್ಚರಿಕೆಯೇ ಉತ್ತಮ” ಎಂಬ ಸಂದೇಶವನ್ನು ಉಲ್ಲೇಖಿಸಿದ ಸಚಿವರು, ಸಾರ್ವಜನಿಕರು ಗುಟ್ಕಾ, ತಂಬಾಕು ಸೇರಿದಂತೆ ಆರೋಗ್ಯಕ್ಕೆ ಹಾನಿಕಾರಕ ದುಷ್ಚಟಗಳಿಂದ ದೂರವಿರಬೇಕು ಎಂದು ಮನವಿ ಮಾಡಿದರು.

ಬೀದರಿನಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಕ್ಯಾನ್ಸರ್ ಸಂಸ್ಥೆ ಸಹಯೋಗದೊಂದಿಗೆ ನಿರ್ಮಾಣವಾಗುತ್ತಿರುವ ಈ ಆಧುನಿಕ ಕ್ಯಾನ್ಸರ್ ಚಿಕಿತ್ಸಾ ಘಟಕ ಜಿಲ್ಲೆಯ ಜನತೆಗೆ ಮಹತ್ವದ ಆರೋಗ್ಯ ಸೇವೆಯನ್ನು ಒದಗಿಸಲಿದೆ ಎಂದು ಹೇಳಿದರು.

ಆರಂಭಿಕ ಹಂತದಲ್ಲೇ ರೋಗ ಪತ್ತೆ, ಸುಧಾರಿತ ತಂತ್ರಜ್ಞಾನ ಆಧಾರಿತ ಚಿಕಿತ್ಸೆ ಹಾಗೂ ತಜ್ಞ ವೈದ್ಯಕೀಯ ಸೇವೆಗಳ ಮೂಲಕ ಅನೇಕ ಜೀವಗಳನ್ನು ಉಳಿಸಲು ಈ ಕೇಂದ್ರ ಸಹಕಾರಿಯಾಗಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande