ಬಳ್ಳಾರಿಯಲ್ಲಿ ಗುತ್ತಿಗೆದಾರನಿಂದ ಮರಗಳ ಅಕ್ರಮ ಕಡಿತ ; ಕಪ್ಪು ಪಟ್ಟಿಗೆ ಹಾಕಲು ಮನವಿ
ಬಳ್ಳಾರಿ, 13 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರದಲ್ಲಿ ರಸ್ತೆ ಅಗಲೀಕರಣದ ನೆಪದಲ್ಲಿ ಅರಣ್ಯ ಇಲಾಖೆಯ ಪರವಾನಿಗೆ ಪಡೆಯದೇ ಅಕ್ರಮವಾಗಿ ರಸ್ತೆ ನಿರ್ಮಾಣದ ಗುತ್ತಿಗೆದಾರನ ಪರವಾದವರು ಮರಗಿಡಗಳನ್ನು ಕಡಿದಿದ್ದು, ಆ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಉಪ್
ಬಳ್ಳಾರಿಯಲ್ಲಿ ಗುತ್ತಿಗೆದಾರನಿಂದ ಮರಗಳ ಅಕ್ರಮ ಕಡಿತ : ಬ್ಲಾಕ್ಲೀಸ್ಟ್ಗೆ ಹಾಕಲು ಮನವಿ


Illegal cutting of trees by contractor in Bellary: Request to be blacklisted


ಬಳ್ಳಾರಿ, 13 ಮೇ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರದಲ್ಲಿ ರಸ್ತೆ ಅಗಲೀಕರಣದ ನೆಪದಲ್ಲಿ ಅರಣ್ಯ ಇಲಾಖೆಯ ಪರವಾನಿಗೆ ಪಡೆಯದೇ ಅಕ್ರಮವಾಗಿ ರಸ್ತೆ ನಿರ್ಮಾಣದ ಗುತ್ತಿಗೆದಾರನ ಪರವಾದವರು ಮರಗಿಡಗಳನ್ನು ಕಡಿದಿದ್ದು, ಆ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಉಪ್ಪಾರ ಬಿ.ಎಂ. ಸಿದ್ದೇಶ್ ಅವರು ಅರಣ್ಯ ಇಲಾಖೆಯ ಸಚಿವರಾದ ಈಶ್ವರಖಂಡ್ರೆ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಲಿಯ ಆದೇಶಗಳನ್ನು - ಷರತ್ತುಗಳು ; ನಿಯಮಗಳನ್ನು ಉಲ್ಲಂಘನೆ ಮಾಡಿ ರಸ್ತೆ ಗುತ್ತಿಗೆದಾರರು ಮರಗಿಡಗಳನ್ನ ಅಕ್ರಮವಾಗಿ ಕಡಿದಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ. ಶಾಸಕ ನಾರಾ ಭರತರೆಡ್ಡಿ ಅವರೇ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ, ಆರೋಪಿಗಳನ್ನು ಬಿಡಿಸಿಕೊಂಡು ಬಂದಿದ್ದಾರೆ. ಪರಿಸ್ಥಿತಿ ಹೀಗೇ ಮುಂದುವರೆದಲ್ಲಿ ಅಧಿಕಾರಿಗಳು ತಪ್ಪಿತಸ್ತರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಿಲ್ಲ. ಕಾರಣ ಗುತ್ತಿಗೆದಾರರ ಹೆಸರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಕೋರಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande