
ಕೊಪ್ಪಳ, 13 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಬಾಲಭವನ ಸೊಸೈಟಿ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದು.
ಶಿಬಿರವು 15 ದಿನಗಳ ಅವಧಿಯದ್ದಾಗಿದ್ದು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಕರಾಟೆ, ಯೋಗ, ಇತರೆ ಚಟುವಟಿಕೆಗಳು ನಡೆಯಲಿವೆ.
5 ರಿಂದ 16 ವರ್ಷದೊಳಗಿನ ಆಸಕ್ತ ಸರ್ಕಾರಿ ಶಾಲೆ ಅಥವಾ ಸೌಲಭ್ಯ ವಂಚಿತ ಮಕ್ಕಳು ಚಟುವಟಿಕೆಯಲ್ಲಿ ಭಾಗವಹಿಸಬಹುದು.
ಆಸಕ್ತರು ಮೇ 16 ರ ಮಧ್ಯಾಹ್ನ 1.30 ಗಂಟೆಯೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಮೇಲಿನ ವಿಳಾಸ ಅಥವಾ ದೂ.ಸಂ: 08539-222703 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್