

ಕೊಪ್ಪಳ, 13 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಚರಿಸಲಾಗುವ ಮೇ 16 ರಂದು ಆಚರಿಸಲಾಗುವ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ್ ಅವರು ಭಿತ್ತಿ ಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಜಿಲ್ಲಾ ಅನುಷ್ಠಾನಾಧಿಕಾರಿ ಡ.ರವೀಂದ್ರನಾಥ ಎಂ.ಎಚ್., ಜಿಲ್ಲಾ ಆರ್ಸಿಎಚ್ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಕಾಶ ವಿ., ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ ಎಚ್., ಜಿಲ್ಲಾ ಸರ್ವೇಕ್ಷಣಾ ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನಂದಕುಮಾರ, ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿ ಡಾ.ಗೋನಾಳ ಕುಮಾರಸ್ವಾಮಿ, ಕೊಪ್ಪಳ ಕಿಮ್ಸ್ನ ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ, ತಜ್ಞ ವೈದ್ಯರಾದ ಡಾ.ಈಶ್ವರ ಸವಡಿ, ಫಿಜಿಶಿಯನ್ ಡಾ.ಸಂಗನಬಸಪ್ಪ, ಡಾ.ಸೋಮಶೇಖರ ಕೆ., ಜಿಲ್ಲಾ ಆಯುಷ್ ಅಧಿಕಾರಿ ಡಾ.ಪರ್ವತಗೌಡ ಹಾಗೂ ವಿವಿಧ ತಾಲ್ಲೂಕುಗಳ ಆರೋಗ್ಯಾಧಿಕಾರಿಗಳು, ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್