ರಿಲಯನ್ಸ್ ಕಮ್ಯುನಿಕೇಷನ್ಸ್ ಪ್ರಕರಣ ; ಮಾಜಿ ಅಧಿಕಾರಿಗಳ ಮನೆ ಮೇಲೆ ಸಿಬಿಐ ದಾಳಿ
ನವದೆಹಲಿ, 14 ಮೇ (ಹಿ.ಸ.) : ಆ್ಯಂಕರ್ : ಅನಿಲ್ ಅಂಬಾನಿ ನೇತೃತ್ವದ ಎಡಿಎ ಗ್ರೂಪ್ಗೆ ಸೇರಿದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ ಗುರುವಾರ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದೆ. ಮುಂಬೈ, ಗುರುಗ್ರಾಮ್ ಹಾಗೂ ಬೆಂಗಳ
CBI logo


ನವದೆಹಲಿ, 14 ಮೇ (ಹಿ.ಸ.) :

ಆ್ಯಂಕರ್ : ಅನಿಲ್ ಅಂಬಾನಿ ನೇತೃತ್ವದ ಎಡಿಎ ಗ್ರೂಪ್ಗೆ ಸೇರಿದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ ಗುರುವಾರ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದೆ.

ಮುಂಬೈ, ಗುರುಗ್ರಾಮ್ ಹಾಗೂ ಬೆಂಗಳೂರು ಸೇರಿದಂತೆ ಮೂರು ನಗರಗಳಲ್ಲಿ ಒಟ್ಟು ಏಳು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದ್ದು, ಕಂಪನಿಯ 2015–2017 ಅವಧಿಯಲ್ಲಿ ಸೇವೆ ಸಲ್ಲಿಸಿದ್ದ ಅಂದಿನ ಸಿಇಒ, ಸಿಎಫ್ಒ ಹಾಗೂ ನಿರ್ದೇಶಕರ ನಿವಾಸಗಳು ಶೋಧಕ್ಕೆ ಒಳಪಟ್ಟಿವೆ.

ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ ಶೋಧ ವಾರಂಟ್ ಆಧಾರದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ದಾಳಿಯ ವೇಳೆ ಹಲವು ಅಪರಾಧ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕ ವಲಯದ ಬ್ಯಾಂಕುಗಳು ಹಾಗೂ ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಸಲ್ಲಿಸಿದ ದೂರುಗಳ ಆಧಾರದ ಮೇಲೆ ಈ ತನಿಖೆ ಮುಂದುವರಿದಿದೆ. ಕಳೆದ ಕೆಲವು ತಿಂಗಳಲ್ಲಿ ಅನಿಲ್ ಅಂಬಾನಿ ನೇತೃತ್ವದ ಅನಿಲ್ ಅಂಬಾನಿ ಅವರ ರಿಲಯನ್ಸ್ ಗ್ರೂಪ್ ವಿರುದ್ಧ ಸಾವಿರಾರು ಕೋಟಿ ರೂಪಾಯಿ ವಂಚನೆ ನಡೆದಿದೆ ಎಂಬ ಆರೋಪದಡಿ ಸಿಬಿಐ ಒಟ್ಟು ಏಳು ಪ್ರಕರಣಗಳನ್ನು ದಾಖಲಿಸಿದೆ.

ಈ ಪ್ರಕರಣಗಳಿಂದ ಒಟ್ಟು ₹27,337 ಕೋಟಿ ನಷ್ಟವಾಗಿದೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆ ಸಿಬಿಐ ಈಗಾಗಲೇ 31 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿರುವುದಾಗಿ ತಿಳಿಸಿದೆ.

ಇದೇ ವೇಳೆ, ರಿಲಯನ್ಸ್ ಕಮ್ಯುನಿಕೇಷನ್ಸ್ನ ಜಂಟಿ ಅಧ್ಯಕ್ಷ ಡಿ. ವಿಶ್ವನಾಥ್ ಹಾಗೂ ಉಪಾಧ್ಯಕ್ಷ ಅನಿಲ್ ಕಾಲಿಯಾ ಅವರನ್ನು ಏಪ್ರಿಲ್ 20ರಂದು ಬಂಧಿಸಲಾಗಿದ್ದು, ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande