ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕಠಿಣ ಕ್ರಮ: ಜಿಲ್ಲಾಡಳಿತ ಎಚ್ಚರಿಕೆ
ಗದಗ, 14 ಮೇ (ಹಿ.ಸ.): ಆ್ಯಂಕರ್: ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳು ಹಾಗೂ ರೆಸಾರ್ಟ್ ಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಅಧಿಕೃತ ಅನುಮೋದನೆ ಪಡೆಯದೇ ನಡೆಸಲಾಗುತ್ತಿರುವ ಹೋಂಸ್ಟೇ ಮತ್ತು ರೆಸಾ
ಫೋಟೋ


ಗದಗ, 14 ಮೇ (ಹಿ.ಸ.):

ಆ್ಯಂಕರ್: ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳು ಹಾಗೂ ರೆಸಾರ್ಟ್ ಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಅಧಿಕೃತ ಅನುಮೋದನೆ ಪಡೆಯದೇ ನಡೆಸಲಾಗುತ್ತಿರುವ ಹೋಂಸ್ಟೇ ಮತ್ತು ರೆಸಾರ್ಟ್ ಗಳು ತಕ್ಷಣವೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಅನುಮತಿ ಇಲ್ಲದೆ ಹೋಂಸ್ಟೇ ಹಾಗೂ ರೆಸಾರ್ಟ್ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇವು ಪ್ರವಾಸೋದ್ಯಮ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸುತ್ತಿವೆ ಎಂದು ತಿಳಿಸಿದ್ದಾರೆ.

ಕಾನೂನುಬದ್ಧವಾಗಿ ಹೋಂಸ್ಟೇ ಅಥವಾ ರೆಸಾರ್ಟ್ ಮುಂದುವರಿಸಲು ಆಸಕ್ತಿ ಹೊಂದಿರುವ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಗದಗ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುರಕ್ಷತೆ, ಸ್ವಚ್ಛತೆ, ಮೂಲಸೌಕರ್ಯ ಮತ್ತು ಪ್ರವಾಸಿಗರ ಹಿತದೃಷ್ಟಿಯಿಂದ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದ್ದು, ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುವ ಘಟಕಗಳು ಕಾನೂನುಬಾಹಿರವಾಗುತ್ತವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನಿಯಮ ಉಲ್ಲಂಘನೆ ಮುಂದುವರಿಸಿದರೆ ಅಂತಹ ಹೋಂಸ್ಟೇ ಹಾಗೂ ರೆಸಾರ್ಟ್ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande