ಒಮಾನ್ ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ ; ಭಾರತ ತೀವ್ರ ಖಂಡನೆ
ನವದೆಹಲಿ, 14 ಮೇ (ಹಿ.ಸ.) : ಆ್ಯಂಕರ್ : ಒಮಾನ್ ಕರಾವಳಿಯಲ್ಲಿ ಬುಧವಾರ ಭಾರತೀಯ ಧ್ವಜ ಹೊತ್ತ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಕುರಿತು ಅಧಿಕೃತ ಹೇಳಿಕೆ ನೀಡಿದ್ದು, “ಇಂತಹ ದಾಳಿಗಳು ಸಂಪೂರ್ಣವಾಗಿ ಅಸ
ರಣಧೀರ್ ಜೈಸ್ವಾಲ್


ನವದೆಹಲಿ, 14 ಮೇ (ಹಿ.ಸ.) :

ಆ್ಯಂಕರ್ : ಒಮಾನ್ ಕರಾವಳಿಯಲ್ಲಿ ಬುಧವಾರ ಭಾರತೀಯ ಧ್ವಜ ಹೊತ್ತ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಕುರಿತು ಅಧಿಕೃತ ಹೇಳಿಕೆ ನೀಡಿದ್ದು, “ಇಂತಹ ದಾಳಿಗಳು ಸಂಪೂರ್ಣವಾಗಿ ಅಸ್ವೀಕಾರಾರ್ಹ” ಎಂದು ಹೇಳಿದ್ದಾರೆ.

ವಾಣಿಜ್ಯ ಹಡಗುಗಳು ಹಾಗೂ ನಾಗರಿಕ ನಾವಿಕರನ್ನು ಗುರಿಯಾಗಿಸಿಕೊಂಡು ನಡೆಯುವ ನಿರಂತರ ದಾಳಿಗಳನ್ನು ಭಾರತ ಸಹಿಸದು ಎಂದು ಸ್ಪಷ್ಟಪಡಿಸಿದ್ದಾರೆ. ದಾಳಿಯ ಸಂದರ್ಭದಲ್ಲಿದ್ದ ಎಲ್ಲಾ ಭಾರತೀಯ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ಕೂಡ ಅವರು ತಿಳಿಸಿದ್ದಾರೆ.

ಈ ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆಗೆ ತಕ್ಷಣ ಸ್ಪಂದಿಸಿದ ಒಮಾನ್ ಅಧಿಕಾರಿಗಳಿಗೆ ಭಾರತ ಸರ್ಕಾರ ಧನ್ಯವಾದಗಳನ್ನು ಸಲ್ಲಿಸಿದೆ.

ಭಾರತ ಸರ್ಕಾರವು ವಾಣಿಜ್ಯ ಸಾಗಣೆ ಮಾರ್ಗಗಳ ಸುರಕ್ಷತೆ ಮತ್ತು ಸಮುದ್ರ ವ್ಯಾಪಾರದ ಸ್ವಾತಂತ್ರ್ಯವನ್ನು ಹಾನಿಗೊಳಿಸುವ ಯಾವುದೇ ಕ್ರಮಗಳನ್ನು ಖಂಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande