ನರೇಗಾ ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ: ಇ.ಓ ಆರ್.ವಿ. ದೊಡ್ಡಮನಿ
ಗದಗ, 14 ಮೇ (ಹಿ.ಸ.): ಆ್ಯಂಕರ್: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾ.ಪಂ. ವ್ಯಾಪ್ತಿಯ ಗೋವನಕೊಪ್ಪ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅವರು ಮ
ಫೋಟೋ


ಗದಗ, 14 ಮೇ (ಹಿ.ಸ.):

ಆ್ಯಂಕರ್: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾ.ಪಂ. ವ್ಯಾಪ್ತಿಯ ಗೋವನಕೊಪ್ಪ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಅವರು ಮಾತನಾಡಿ, ನರೇಗಾ ಯೋಜನೆಯಡಿ ಕೂಲಿಕಾರರು ಗ್ರಾಮ ಪಂಚಾಯತಿಗೆ ನಮೂನೆ 6ರಲ್ಲಿ ಕೆಲಸದ ಬೇಡಿಕೆ ಸಲ್ಲಿಸಿ, ಗ್ರಾಮದಲ್ಲಿಯೇ ಕೆಲಸದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಾಬ್ ಕಾರ್ಡ್ ಇಲ್ಲದೆ ಇರುವ ಕೂಲಿ ಕಾರ್ಮಿಕರು ತಕ್ಷಣವೇ ದಾಖಲಾತಿಗಳನ್ನು ನೀಡಿ ಹೊಸ ಜಾಬ್ ಕಾರ್ಡ್ಗಳನ್ನು ಪಡೆದುಕೊಂಡು ಯೋಜನೆಯ ಲಾಭವನ್ನು ಪಡೆಯಿರಿ ಎಂದು ಸಲಹೆ ನೀಡಿದರು. ಇದೇ ಸಂರ್ಧಭದಲ್ಲಿ ಬೇಸಿಗೆಯ ಬಿಸಿಲು ಹೆಚ್ಚಾಗಿರುವುದರಿಂದ ಫಲಾನುಭವಿಗಳು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು. ನಮ್ಮ ದೇಹದ ಆರೋಗ್ಯವು ಬಹು ಮುಖ್ಯವಾಗಿದ್ದು ಹೆಚ್ಚು ನೀರು ಕುಡಿಯಿರಿ ನೀರನ್ನು ಕುದಿಸಿ ಆರಿಸಿ ಕುಡಿಯಿರಿ ಎಂದು ಸಲಹೆ ನೀಡಿದರು.

ಕೂಲಿಕಾರರು ಅಳತೆಗೆ ಅನುಸಾರವಾಗಿ ಕೂಲಿ ಪಾವತಿಯಾಗುತ್ತದೆ. ಅಳತೆಗೆ ತಕ್ಕಂತೆ ಕೆಲಸ ಮಾಡಬೇಕು. ಪ್ರತಿ ದಿನ ಎನ್ ಎಂ ಎಂ ಎಸ್ ಎರಡು ಬಾರಿ ಹಾಜರಾತಿ ತೆಗೆದುಕೊಳ್ಳಲಾಗುತ್ತದೆ. ಕೂಲಿಕಾರರು ಎರಡು ಹಾಜರಾತಿಯನ್ನು ಕಡ್ಡಾಯವಾಗಿ ಪಾಲ್ಗೊಂಡು ಹಾಜರಾತಿ ಹಾಕಿಸಬೇಕು. ಒಂದು ವೇಳೆ ಬೆಳಗಿನ ಹಾಜರಾತಿ ಹಾಕಿಸಿ ಮದ್ಯಾಹ್ನದ ಹಾಜರಾತಿ ಹಾಕಿಸದಿದ್ದರೆ ತಮಗೆ ಆ ದಿನದ ಕೂಲಿ ಪಾವತಿಯಾಗುವುದಿಲ್ಲ ಎಂದು ತಿಳಿಸಿದರು.

ನರೇಗಾ ಯೋಜನೆಯ ಕಿರು ಪರಿಚಯದ ಜೊತೆಗೆ ಕಾಮಗಾರಿಯ ಭೌತಿಕ ಸ್ಥಿತಿ, ಗುಣಮಟ್ಟವನ್ನು ವೀಕ್ಷಿಸಿ ಇ-ಕೆವೈಸಿ, ಹಾಗೂ ಹಿರಿಯ ನಾಗರಿಕರು,ವಿಕಲಚೇತನರು ಗರ್ಭಿಣಿಯರಿಗೆ ಸ್ಥಳದಲ್ಲಿ ರಿಯಾಯಿತಿಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಯಿತು. ನಿಮ್ಮ ನೆರೆ ಹೊರೆಯ ಜನರು ಗುಳೆ ಹೋಗದಂತೆ ತಡೆದು ನರೇಗಾ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಮನವಿ ಮಾಡಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ, ನರೇಗಾ ಸಿಬ್ಬಂದಿಗಳು, ಗ್ರಾ.ಪಂ ಸಿಬ್ಬಂದಿಗಳು, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಹಾಜರಿದ್ದರು.

ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಈಗ ಎನ್ ಎಂ ಎಂ ಎಸ್ ಅಪ್ಲಿಕೇಶನ್ ಗಮನ ಸೆಳೆದಿದೆ. ಕೇಂದ್ರ ಸರ್ಕಾರ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ ಎನ್ ಎಂ ಎಂ ಎಸ್ ಅಪ್ಲಿಕೇಶನ್ ಕಡ್ಡಾಯಗೊಳಿಸಿದೆ ಇದರಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಹಾಜರಾತಿಗಳನ್ನು ಆಧಾರ್ ಆಧಾರಿತ ಫೋಟೋಗ್ರಾಫ ಮುಖಾಂತರ ಪ್ರತಿ ದಿನ ಎರಡು ಬಾರಿ ಕಡ್ಡಾಯವಾಗಿ ಸೆರೆಹಿಡಿಯಲು ಕ್ರಮವಹಿಸಲಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande