ಕೇರಳಂ ನೂತನ ಮುಖ್ಯಮಂತ್ರಿ ಆಗಿ ವಿ.ಡಿ. ಸತೀಶನ್ ಆಯ್ಕೆ
ನವದೆಹಲಿ, 14 ಮೇ (ಹಿ.ಸ.) : ಆ್ಯಂಕರ್ : ಕೇರಳಂ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರನ್ನು ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. ನಾನಾ ಹಂತದ ಚರ್ಚೆಗಳು ಮತ್ತು ದೀರ್ಘ ರಾಜಕೀಯ ಲೆಕ್ಕಾಚಾರಗಳ ಬಳಿಕ ಈ ನಿರ್ಧಾರ ಪ್ರಕಟವಾಗಿದ್ದು, ಕೇರಳ ಕಾಂಗ್ರೆಸ್ ವಲಯದಲ್ಲಿ ಇದು ಮಹತ್ವದ
ಸತೀಶನ್


ನವದೆಹಲಿ, 14 ಮೇ (ಹಿ.ಸ.) :

ಆ್ಯಂಕರ್ : ಕೇರಳಂ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರನ್ನು ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. ನಾನಾ ಹಂತದ ಚರ್ಚೆಗಳು ಮತ್ತು ದೀರ್ಘ ರಾಜಕೀಯ ಲೆಕ್ಕಾಚಾರಗಳ ಬಳಿಕ ಈ ನಿರ್ಧಾರ ಪ್ರಕಟವಾಗಿದ್ದು, ಕೇರಳ ಕಾಂಗ್ರೆಸ್ ವಲಯದಲ್ಲಿ ಇದು ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಸಿಎಂ ಹುದ್ದೆಯ ರೇಸ್ನಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಪ್ರಮುಖವಾಗಿ ಚರ್ಚೆಗೆ ಬಂದಿದ್ದವು. ಅಂತಿಮವಾಗಿ ಪಕ್ಷದ ಹೈಕಮಾಂಡ್ ವಿ.ಡಿ. ಸತೀಶನ್ ಅವರ ಹೆಸರನ್ನು ಅಂತಿಮಗೊಳಿಸಿದೆ.

ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್ ವಾಸ್ನಿಕ್ ಅವರು ಸುದ್ದಿಗೋಷ್ಠಿಯಲ್ಲಿ ನೂತನ ಸಿಎಂ ಹೆಸರನ್ನು ಪ್ರಕಟಿಸಿದರು.

ಮುಖ್ಯಮಂತ್ರಿ ಆಯ್ಕೆಗೂ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಹಿರಿಯ ನಾಯಕರೊಂದಿಗೆ ಕೊನೆಯ ಹಂತದ ಸಮಾಲೋಚನೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ. ಪಕ್ಷದ ಒಳಗಿನ ಸಮತೋಲನ, ರಾಜ್ಯ ರಾಜಕೀಯ ಪರಿಸ್ಥಿತಿ ಹಾಗೂ ಚುನಾವಣಾ ಫಲಿತಾಂಶಗಳ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande