
ಕೊಪ್ಪಳ, 14 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಕ್ರೀಡಾಸಕ್ತ ಮಕ್ಕಳ ಮತ್ತು ಯುವಕರಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಹಾಗೂ ದಿ ಬೆಸ್ಟ್ ಸ್ಕೇಟಿಂಗ್ ಅಕಾಡೆಮಿ ಇವರ ಸಹಯೋಗದಲ್ಲಿ ಉಚಿತ ಸ್ಕೇಟಿಂಗ್ ಬೇಸಿಗೆ ತರಬೇತಿ ಶಿಬಿರವನ್ನು ಮೇ 20 ರಿಂದ 25ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ 5 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕ್ರೀಡಾಪಟುಗಳ ಅನುಕೂಲಕ್ಕಾಗಿ ದಿನಕ್ಕೆ ಎರಡು ಅವಧಿಗಳಲ್ಲಿ ತರಬೇತಿ ನೀಡಲಾಗುತ್ತದ್ದು, ಬೆಳಿಗ್ಗೆ 6.30ರಿಂದ 7.30ರವರೆಗೆ ಹಾಗೂ ಸಂಜೆ 5ರಿಂದ 6ರವರೆಗೆ ತರಬೇತಿ ನಡೆಯಲಿದೆ.
ಸ್ಕೇಟಿಂಗ್ ಕೌಶಲ್ಯಾಭಿವೃದ್ಧಿ, ದೈಹಿಕ ಸಾಮರ್ಥ್ಯವೃದ್ಧಿ ಹಾಗೂ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಅನುಭವಿಗಳಿಂದ ತರಬೇತಿ ನೀಡಲಾಗುತ್ತಿದ್ದು, ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ ಶ್ರೀ ಶಿವಾನಂದ ಎಚ್ (9738999420), ಶ್ರೀ ಮೆಹಬೂಬ್ ಎಚ್ (8105065279) ಹಾಗೂ ಶ್ರೀ ಎಮ್.ಡಿ. ಸಾಯಿಫುಲ್ಲಾ (9731753279) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್