ಅಮೃತ ಕಾಲದ ಹೇಳಿಕೆಗೆ ಅಂತ್ಯ ಹಾಡಿದ ಕೇಂದ್ರ ಸರಕಾರ : ಬಿ.ಕೆ. ಹರಿಪ್ರಸಾದ್
ಬೆಂಗಳೂರು, 15 ಮೇ (ಹಿ.ಸ.) : ಆ್ಯಂಕರ್ : ಪೆಟ್ರೋಲ್, ಡೀಸೆಲ್ ಹಾಗೂ ಅನಿಲದ ದರ ಏರಿಕೆ ವಿಚಾರವಾಗಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ದೇಶದ ಜನರು ನರೇಂದ್ರ ಮೋದಿ
BKHP


ಬೆಂಗಳೂರು, 15 ಮೇ (ಹಿ.ಸ.) :

ಆ್ಯಂಕರ್ : ಪೆಟ್ರೋಲ್, ಡೀಸೆಲ್ ಹಾಗೂ ಅನಿಲದ ದರ ಏರಿಕೆ ವಿಚಾರವಾಗಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ದೇಶದ ಜನರು ನರೇಂದ್ರ ಮೋದಿ ಸರ್ಕಾರದ ‘ಅಚ್ಚೇ ದಿನ್’ ನೋಡಲೂ ಇಲ್ಲ, ‘ಅಮೃತಕಾಲ’ದಲ್ಲಿ ಬದುಕಲೂ ಆಗುತ್ತಿಲ್ಲ” ಎಂದು ಟೀಕಿಸಿದ್ದಾರೆ.

ಇಂಧನ ದರ ಏರಿಕೆಯಿಂದ ದೇಶದ ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿರುವ ಅವರು, “ಅಚ್ಚೇ ದಿನ್” ಹೆಸರಿನಲ್ಲಿ ಜನರನ್ನು ಮೋಸ ಮಾಡಿದ ಸರ್ಕಾರ ಇಂದು ದುಬಾರಿ ಬದುಕು, ತೆರಿಗೆ ದರೋಡೆ ಹಾಗೂ ಯುವಕರಿಗೆ ನಿರುದ್ಯೋಗದ ನರಕವನ್ನು ನೀಡಿದೆ ಎಂದು ಕಿಡಿಕಾರಿದ್ದಾರೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದನ್ನು ನೆಪವನ್ನಾಗಿ ಮಾಡುತ್ತಿರುವ ಕೇಂದ್ರ ಸರ್ಕಾರ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದಾಗ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಯಾಕೆ ಕಡಿಮೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಅದಾನಿ-ಅಂಬಾನಿ ಕಂಪನಿಗಳ ಲಾಭಕ್ಕಾಗಿ ಸಾಮಾನ್ಯ ಜನರ ಮೇಲೆ ತೆರಿಗೆ ಭಾರ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ಪರಿಣಾಮ ಕೇವಲ ವಾಹನ ಸವಾರರಿಗಷ್ಟೇ ಸೀಮಿತವಾಗುವುದಿಲ್ಲ. ರೈತರ ಹೊಲದಿಂದ ಮಾರುಕಟ್ಟೆಗೆ ಬರುವ ಪ್ರತಿಯೊಂದು ಆಹಾರ ವಸ್ತುವಿನ ಮೇಲೂ ಅದರ ಹೊರೆ ಬೀಳುತ್ತದೆ ಎಂದು ಅವರು ಹೇಳಿದ್ದಾರೆ. ಸಾರಿಗೆ ವೆಚ್ಚ ಏರಿಕೆಯಿಂದ ತರಕಾರಿ, ಅಕ್ಕಿ, ಹಣ್ಣು, ಹಾಲು ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಅಂತಿಮವಾಗಿ ಸಾಮಾನ್ಯ ಜನರ ಅಡಿಗೆ ಮನೆಯೇ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಸಮಯದಲ್ಲಿ “ಧರ್ಮ ಅಪಾಯದಲ್ಲಿದೆ”, “ಹಿಂದೂಗಳು ಅಪಾಯದಲ್ಲಿದ್ದಾರೆ”, “ಪಾಕಿಸ್ತಾನ”, “ಮಂದಿರ”, “ಮಂಗಳಸೂತ್ರ” ಮುಂತಾದ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರ ಗಮನ ಬೇರೆಡೆಗೆ ಸೆಳೆಯಲಾಗುತ್ತದೆ. ಆದರೆ ಚುನಾವಣೆ ಮುಗಿದ ಬಳಿಕ ಜನರಿಗೆ ಸಿಗುವುದು ಪೆಟ್ರೋಲ್ ಬೆಲೆ ಏರಿಕೆ, ಗ್ಯಾಸ್ ದರ ಏರಿಕೆ, ತೆರಿಗೆ ಹೊಡೆತ ಹಾಗೂ ಬದುಕಿನ ಸಂಕಷ್ಟ ಮಾತ್ರ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

ಜನರ ಜೇಬು ಖಾಲಿ ಮಾಡಿ ಕಾರ್ಪೊರೇಟ್ ಸಂಸ್ಥೆಗಳ ಖಜಾನೆ ತುಂಬಿಸುವ ರಾಜಕಾರಣಕ್ಕೆ ದೇಶ ಎಷ್ಟು ದಿನ ಬಲಿಯಾಗಬೇಕು ಎಂದು ಪ್ರಶ್ನಿಸಿರುವ ಅವರು, ಬಿಜೆಪಿ ಸರ್ಕಾರದ ದುರಾಡಳಿತದಿಂದ ದೇಶದ ಆರ್ಥಿಕ ವ್ಯವಸ್ಥೆ ಇನ್ನಷ್ಟು ಕುಸಿಯುವ ದಿನಗಳು ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande