ಸ್ವಚ್ಛ ಹಾಗೂ ಅಚ್ಚುಕಟ್ಟಾದ ಕಾರ್ಯಾಲಯದಿಂದ ಸಿಬ್ಬಂದಿಗೆ ಕೆಲಸದ ಪ್ರೇರಣೆ : ಸಿಇಒ ರಿಷಿ ಆನಂದ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ನವೀಕರಣಗೊಂಡ ಪೀಠೋಪಕರಣಗಳು ಹಾಗೂ ಮೂಲಭೂತ ಸೌಲಭ್ಯಗಳ ಉದ್ಘಾಟನಾ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಉದ್ಘಾ
ಸಭೆ


ವಿಜಯಪುರ, 15 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ನವೀಕರಣಗೊಂಡ ಪೀಠೋಪಕರಣಗಳು ಹಾಗೂ ಮೂಲಭೂತ ಸೌಲಭ್ಯಗಳ ಉದ್ಘಾಟನಾ ಕಾರ್ಯಕ್ರಮವು ಜರುಗಿತು.

ಕಾರ್ಯಕ್ರಮವನ್ನು ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಉದ್ಘಾಟಿಸಿ ಮಾತನಾಡಿದರು.

ಕಾರ್ಯಾಲಯವು ಎಷ್ಟು ಅಚ್ಚುಕಟ್ಟಾಗಿ, ಸ್ವಚ್ಛವಾಗಿ ಮತ್ತು ವ್ಯವಸ್ಥಿತವಾಗಿ ಇರುತ್ತದೆಯೋ ಅಷ್ಟು ಸಿಬ್ಬಂದಿಗಳಿಗೆ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಪ್ರೇರಣೆ ದೊರೆಯುತ್ತದೆ ಎಂದು ಅವರು ಹೇಳಿದರು.

ಹಳೆಯ ಕಟ್ಟಡದಲ್ಲಿಯೇ ಸಿಬ್ಬಂದಿಗಳ ಅಗತ್ಯಗಳಿಗೆ ಅನುಗುಣವಾಗಿ ಟೇಬಲ್, ಕುರ್ಚಿ, ಗಣಕಯಂತ್ರ, ಪ್ರಿಂಟರ್, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಉತ್ತಮ ವಾತಾವರಣವನ್ನು ಕಲ್ಪಿಸಿರುವ ತಾಲೂಕು ಪಂಚಾಯತಿಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇನ್ನಷ್ಟು ಉತ್ಸಾಹ ಹಾಗೂ ಜವಾಬ್ದಾರಿತನದಿಂದ ಕಾರ್ಯನಿರ್ವಹಿಸಿ ತಿಕೋಟಾವನ್ನು ಮಾದರಿ ತಾಲೂಕಾಗಿ ರೂಪಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು. ಸಾರ್ವಜನಿಕರ ಸಮಸ್ಯೆಗಳನ್ನು ಹೊತ್ತು ಬರುವ ಗ್ರಾಮೀಣ ಜನರಿಗೆ ತ್ವರಿತ ಹಾಗೂ ಸಮರ್ಪಕ ಪರಿಹಾರ ಒದಗಿಸುವುದು ಅಧಿಕಾರಿಗಳ ಮುಖ್ಯ ಕರ್ತವ್ಯವಾಗಿದೆ ಎಂದರು.

ಸಿಬ್ಬಂದಿಗಳಿಗೆ ಒದಗಿಸಲಾದ ಸೌಲಭ್ಯಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಜನಸ್ನೇಹಿ ಆಡಳಿತ ನೀಡಬೇಕು. ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವುದು ಅತ್ಯಂತ ಮುಖ್ಯ. ನಮ್ಮ ಕಾರ್ಯಾಲಯದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು ಹಾಗೂ ಅದರ ಸ್ವಚ್ಛತೆ ಕಾಪಾಡುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯತಿಗಳೂ ಸಹ ಇದೇ ಮಾದರಿಯಲ್ಲಿ ಜನಸ್ನೇಹಿ ಮತ್ತು ಸಿಬ್ಬಂದಿ ಸ್ನೇಹಿ ವಾತಾವರಣ ನಿರ್ಮಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಹಾಗೂ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತರಾಯಗೌಡ ಬಿರಾದಾರ, ಸಹಾಯಕ ಲೆಕ್ಕಾಧಿಕಾರಿ ಅನ್ವರಹುಸೇನ ನಧಾಪ, ತಾಲೂಕು ಯೋಜನಾಧಿಕಾರಿ ಮಹಾಂತೇಶ ಬಾಗೇವಾಡಿ, ಸಹಾಯಕ ನಿರ್ದೇಶಕರಾದ ಶೋಭಕ್ಕ ಶಿಳೀನ, ಬಸವರಾಜ ಸಂಕಗೊಂಡ ಸೇರಿದಂತೆ ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಗಳ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ತಾಲೂಕು ಐಇಸಿ ಸಂಯೋಜಕರಾದ ಕಲ್ಲಪ್ಪ ನಂದರಗಿ ನಿರೂಪಿಸಿದರು. ಪಿಡಿಓ ಶ್ರೀಶೈಲ ಹಡಪದ ಸ್ವಾಗತಿಸಿದರು. ಸರ್ವಮಂಗಲಾ ಮುಪ್ಪಯ್ಯನಮಠ ಪ್ರಾರ್ಥನೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ವಯೋನಿವೃತ್ತಿ ಹೊಂದಿದ ಮಹಾದೇವ ವಾಜಂತ್ರಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮವು ಸರಳವಾಗಿ ಆದರೆ ಅರ್ಥಪೂರ್ಣವಾಗಿ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande