
ವಿಜಯಪುರ, 15 ಮೇ (ಹಿ.ಸ.) :
ಆಂಕರ್ : ಬಸವನಬಾಗೇವಾಡಿ ಮತಕ್ಷೇತ್ರದ ಕೊಲ್ಹಾರ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಸಕ್ರಿಯ ಯುವ ಕಾರ್ಯಕರ್ತರಾದ ತೋಸಿಫ್ ಗಿರಗಾವಿ ಅವರು ಹೃದಯಾಘಾತದಿಂದ ನಿಧನರಾದ ಘಟನೆ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣ ಮಾಡಿದೆ ಎಂದು ಸಚಿವ ಶಿವಾನಂದ ಪಾಟೀಲ ಸಂತಾಪ ಸೂಚಿಸಿದರು. ಮೃತರ ಮನೆಗೆ ಭೇಟಿ ನೀಡಿ ಬೇಸರ ವ್ಯಕ್ತಪಡಿಸಿದರು.
ಮೇ 13, 2026ರ ಮಂಗಳವಾರದಂದು ಸಂಭವಿಸಿದ ಈ ಅಕಾಲಿಕ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ತೋಸಿಫ್ ಗಿರಗಾವಿ ಅವರು ಕಾಂಗ್ರೆಸ್ ಪಕ್ಷದ ಸಂಘಟನೆ ಕಾರ್ಯಗಳಲ್ಲಿ ಸದಾ ಸಕ್ರಿಯವಾಗಿ ತೊಡಗಿಸಿಕೊಂಡು ಯುವ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತಿದ್ದವರು. ಪಕ್ಷದ ಕಾರ್ಯಕ್ರಮಗಳು, ಸಭೆಗಳು ಹಾಗೂ ಜನಪರ ಹೋರಾಟಗಳಲ್ಲಿ ಅವರು ನಿರಂತರವಾಗಿ ಭಾಗವಹಿಸುತ್ತಿದ್ದು, ಸ್ಥಳೀಯ ಮಟ್ಟದಲ್ಲಿ ಒಬ್ಬ ಸಮರ್ಪಿತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.
ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಶಿವಾನಂದ ಪಾಟೀಲ
ತೋಸಿಫ್ ಗಿರಗಾವಿ ಅವರ ನಿಧನದ ಸುದ್ದಿ ತಿಳಿದ ಶಾಸಕ ಶಿವಾನಂದ ಪಾಟೀಲ ಅವರು ಇಂದು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಅವರು, “ಯುವ ವಯಸ್ಸಿನಲ್ಲೇ ಒಬ್ಬ ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಿರುವುದು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ತುಂಬಾ ನೋವು ತಂದಿದೆ” ಎಂದು ವಿಷಾದ ವ್ಯಕ್ತಪಡಿಸಿದರು.
“ತುಂಬಲಾರದ ನಷ್ಟ” ಎಂದ ಮುಖಂಡರು
ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಕೂಡ ತೋಸಿಫ್ ಗಿರಗಾವಿ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
“ಪಕ್ಷದ ಕೆಲಸಗಳಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದ ಯುವ ನಾಯಕನ ಅಗಲಿಕೆ ಕಾಂಗ್ರೆಸ್ ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ. ಅವರ ಸೇವೆ ಮತ್ತು ಸರಳ ವ್ಯಕ್ತಿತ್ವ ಎಲ್ಲರ ಮನಸ್ಸಿನಲ್ಲಿ ಸದಾ ಉಳಿಯಲಿದೆ” ಎಂದು ಹಲವರು ಅಭಿಪ್ರಾಯಪಟ್ಟರು.
ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ
ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಲಾಯಿತು. ಸ್ಥಳೀಯ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande