ಕುದರಗೂಂಡ ಕೆರೆ ಹೂಳೆತ್ತುವ ಕಾಮಗಾರಿ ಆರಂಭ : ಕೂಲಿಕಾರರ ಶ್ರಮದಿಂದ ಕೆರೆಗೆ ಹೊಸ ಜೀವ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ ಗ್ರಾಮದ ಕುದರಗೂಂಡ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಭರದಿಂದ ಸಾಗುತ್ತಿದೆ. ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಕೈಗೆತ್ತಿಕೊಳ್ಳಲಾದ ಈ ಕಾಮಗಾರಿ
ನರೇಗಾ


ವಿಜಯಪುರ, 15 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ ಗ್ರಾಮದ ಕುದರಗೂಂಡ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಭರದಿಂದ ಸಾಗುತ್ತಿದೆ. ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಕೈಗೆತ್ತಿಕೊಳ್ಳಲಾದ ಈ ಕಾಮಗಾರಿಯಲ್ಲಿ ಹಲವಾರು ಕೂಲಿಕಾರರು ತೊಡಗಿಸಿಕೊಂಡು ಕೆರೆಯನ್ನು ಪುನರುಜ್ಜೀವನಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬರಗಾಲದ ಪರಿಣಾಮದಿಂದ ವರ್ಷಗಳಿಂದ ಹೂಳು ತುಂಬಿಕೊಂಡಿದ್ದ ಕುದರಗೂಂಡ ಕೆರೆ ತನ್ನ ನೀರಿನ ಸಂಗ್ರಹ ಸಾಮರ್ಥ್ಯವನ್ನು ಕಳೆದುಕೊಂಡಿತ್ತು. ಇದರಿಂದ ರೈತರು ಹಾಗೂ ಗ್ರಾಮಸ್ಥರು ನೀರಿನ ಅಭಾವವನ್ನು ಎದುರಿಸಬೇಕಾಗಿತ್ತು. ಇದೀಗ ಕೆರೆಯ ಹೂಳೆತ್ತುವ ಕಾಮಗಾರಿ ಆರಂಭವಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಪ್ರತಿದಿನ ಬೆಳಿಗ್ಗೆಯಿಂದಲೇ ಕೂಲಿಕಾರರು ಕೆರೆಯಲ್ಲಿ ಹೂಳು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದು, ಜೆಸಿಬಿ ಯಂತ್ರಗಳ ಸಹಾಯದಿಂದ ಕೆರೆಯ ಅಡಿಭಾಗವನ್ನು ಸ್ವಚ್ಛಗೊಳಿಸಲಾಗುತ್ತಿದೆ. ಕೆರೆಯಿಂದ ಹೊರತೆಗೆದ ಹೂಳನ್ನು ರೈತರು ತಮ್ಮ ಹೊಲಗಳಿಗೆ ಸಾಗಿಸಿಕೊಂಡು ಹೋಗುತ್ತಿದ್ದು, ಇದು ಭೂಮಿಯ ಫಲವತ್ತತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ರೈತರು ತಿಳಿಸಿದ್ದಾರೆ.

ಸ್ಥಳೀಯ ಮುಖಂಡರು ಮಾತನಾಡಿ, “ಕುದರಗೂಂಡ ಕೆರೆ ಗ್ರಾಮಕ್ಕೆ ಪ್ರಮುಖ ನೀರಿನ ಮೂಲವಾಗಿದೆ. ಹೂಳೆತ್ತುವ ಕಾಮಗಾರಿ ಪೂರ್ಣಗೊಂಡ ನಂತರ ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಲಿದೆ. ಇದರಿಂದ ರೈತರಿಗೆ ಹಾಗೂ ಜಾನುವಾರುಗಳಿಗೆ ಬಹಳ ಅನುಕೂಲವಾಗಲಿದೆ” ಎಂದು ಹೇಳಿದರು.

ಗ್ರಾಮಸ್ಥರು ಕೂಡ ಕಾಮಗಾರಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದು, ಸರ್ಕಾರ ಹಾಗೂ ಪಂಚಾಯತಿ ವತಿಯಿಂದ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕೆರೆ ಅಭಿವೃದ್ಧಿಯಿಂದ ಭೂಗರ್ಭ ಜಲಮಟ್ಟ ಹೆಚ್ಚಳವಾಗುವ ನಿರೀಕ್ಷೆಯೂ ವ್ಯಕ್ತವಾಗಿದೆ.

ಕಾಮಗಾರಿ ಸ್ಥಳದಲ್ಲಿ ಕೂಲಿಕಾರರು ಶ್ರಮಪಟ್ಟು ಕೆಲಸ ನಿರ್ವಹಿಸುತ್ತಿರುವ ದೃಶ್ಯಗಳು ಗ್ರಾಮೀಣ ಅಭಿವೃದ್ಧಿಯ ಪ್ರತೀಕವಾಗಿದ್ದು, ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣೆಯ ಮಹತ್ವವನ್ನು ಮತ್ತೊಮ್ಮೆ ಸಾಬೀತುಪಡಿಸುತ್ತಿವೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande