ಕುಡಿಯುವ ನೀರು, ಮೂಲಭೂತ ಸೌಲಭ್ಯಗಳಿಗೆ ಒತ್ತು ನೀಡಿ : ಶಾಸಕ ಸಮರ್ಥ್ ಶಾಮನೂರು
ದಾವಣಗೆರೆ, 15 ಮೇ (ಹಿ.ಸ.) : ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಗ್ರಾಮಗಳಲ್ಲಿ ಕುಡಿಯುವ ನೀರು ಹಾಗೂ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಾರ್ವಜನಿಕರಿಂದ ದೂರುಗಳು ಬರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ನೂತನ ಶಾಸಕ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅಧಿಕಾ
Meeting


ದಾವಣಗೆರೆ, 15 ಮೇ (ಹಿ.ಸ.) :

ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಗ್ರಾಮಗಳಲ್ಲಿ ಕುಡಿಯುವ ನೀರು ಹಾಗೂ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಾರ್ವಜನಿಕರಿಂದ ದೂರುಗಳು ಬರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ನೂತನ ಶಾಸಕ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಕಚೇರಿಯ ಅಮೃತ ಮಹೋತ್ಸವ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಕೆಲ ಗ್ರಾಮಗಳಲ್ಲಿ ಮನೆಗಳಿಗೆ ಸಮರ್ಪಕವಾಗಿ ನೀರು ಸರಬರಾಜಾಗುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಹೊಸ ಬೋರ್ವೆಲ್ಗಳನ್ನು ಕೊರೆಸುವುದು ಹಾಗೂ ನೀರಿನ ಟ್ಯಾಂಕ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೈದಾಳ್ ಕ್ಯಾಂಪ್ನಲ್ಲಿ ಸ್ಮಶಾನ ಭೂಮಿಯ ಕೊರತೆ ಕುರಿತು ಚರ್ಚಿಸಿ, ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಜಾಗ ಗುರುತಿಸಲು ತಹಶೀಲ್ದಾರ್ ಅಶ್ವಥ್ ಅವರಿಗೆ ನಿರ್ದೇಶನ ನೀಡಿದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ರಾಮ್ ಬೋವಿ ಮಾತನಾಡಿ, ಮಹಿಳಾ ಸ್ವಸಹಾಯ ಗುಂಪುಗಳಿಗೆ ವಿವಿಧ ಯೋಜನೆಗಳಡಿ ಆರ್ಥಿಕ ನೆರವು ಹಾಗೂ ಸ್ವಯಂ ಉದ್ಯೋಗ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಮತ ಹೊಸ ಗೌಡರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande