ಮೀನುಗಾರಿಕೆಗೆ ಆರ್ಥಿಕ ನೆರವು ; ಕಿಸಾನ್ ಕ್ರೆಡಿಟ್ ಕಾರ್ಡ್
ಕೊಪ್ಪಳ, 15 ಮೇ (ಹಿ.ಸ.) ; ಆ್ಯಂಕರ್ : ಮೀನುಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸುವ ಹಾಗೂ ಮೀನುಗಾರರು ಮತ್ತು ಮೀನು ಕೃಷಿಕರಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ವಿತರಿಸಲು ಅರ್ಜಿ ಆಹ್ವಾನಿಸಿದೆ. ಕೊಪ್ಪಳ, ಕು
ಮೀನುಗಾರಿಕೆಗೆ ಆರ್ಥಿಕ ನೆರವು ; ಕಿಸಾನ್ ಕ್ರೆಡಿಟ್ ಕಾರ್ಡ್


ಕೊಪ್ಪಳ, 15 ಮೇ (ಹಿ.ಸ.) ;

ಆ್ಯಂಕರ್ : ಮೀನುಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸುವ ಹಾಗೂ ಮೀನುಗಾರರು ಮತ್ತು ಮೀನು ಕೃಷಿಕರಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ವಿತರಿಸಲು ಅರ್ಜಿ ಆಹ್ವಾನಿಸಿದೆ.

ಕೊಪ್ಪಳ, ಕುಕನೂರು ಹಾಗೂ ಯಲಬುರ್ಗಾ ತಾಲೂಕಿನ ವ್ಯಾಪ್ತಿಯ ಮೀನುಗಾರರು ಹಾಗೂ ಮೀನು ಕೃಷಿಕರು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಮೀನುಗಾರಿಕೆ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ಗೆ ಮೀನುಗಾರರ ಸಹಕಾರ ಸಂಘಗಳ ಸದಸ್ಯರು, ವೃತ್ತಿಪರ ಮೀನುಗಾರರು ಹಾಗೂ ಆಸಕ್ತ ಮೀನು ಕೃಷಿಕರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ, ಪ್ಯಾನ್ ಕಾರ್ಡ್ ಪ್ರತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮೀನುಗಾರಿಕೆ ನಡೆಸುತ್ತಿರುವ ಕುರಿತು ಪಡೆದ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್ಬುಕ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು.

ಆಸಕ್ತರು ತಮ್ಮ ಅರ್ಜಿಗಳನ್ನು ಮೇ 30 ರೊಳಗಾಗಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಕೆಗೆ ಕೊಪ್ಪಳದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande