ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿಜಯಪುರ ನಗರದಲ್ಲಿ ಮತ್ತೆ ಒಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದ್ದು, ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ನಗರದ ಹೊರವಲಯದ ಪ್ರದೇಶದಲ್ಲಿ ಶವ ಪತ್ತೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸಾರ್ವಜನಿಕರು ಜಮಾ
ಸಾವು


ವಿಜಯಪುರ, 15 ಮೇ (ಹಿ.ಸ.) :

ಆಂಕರ್ : ವಿಜಯಪುರ ನಗರದಲ್ಲಿ ಮತ್ತೆ ಒಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದ್ದು, ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ನಗರದ ಹೊರವಲಯದ ಪ್ರದೇಶದಲ್ಲಿ ಶವ ಪತ್ತೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸಾರ್ವಜನಿಕರು ಜಮಾಯಿಸಿದ್ದು, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಘಟನೆಯ ಮಾಹಿತಿ ದೊರಕುತ್ತಿದ್ದಂತೆ ವಿಜಯಪುರ ಜಿಲ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲವೆಂದು ತಿಳಿದು ಬಂದಿದ್ದು, ಸಾವಿನ ಕಾರಣ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಸಹಜ ಸಾವು ಅಥವಾ ದುಷ್ಕೃತ್ಯ ಎಂಬುದರ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಥಳೀಯರ ಪ್ರಕಾರ, ಬೆಳಗಿನ ವೇಳೆಯಲ್ಲಿ ದಾರಿಹೋಕರೊಬ್ಬರು ಶವವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳವನ್ನು ಸುತ್ತುವರಿದು ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಂಡರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದ್ದು, ರಾತ್ರಿ ವೇಳೆಯಲ್ಲಿ ಭದ್ರತೆ ಹೆಚ್ಚಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಅನಾಹುತ ಮತ್ತು ಅಪರಾಧ ಪ್ರಕರಣಗಳು ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತನ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯ ಮಾಹಿತಿಗಳ ಆಧಾರದ ಮೇಲೆ ತನಿಖೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ಬಹಿರಂಗವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಪ್ರಕರಣ ಇದೀಗ ವಿಜಯಪುರದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕರಲ್ಲಿ ಹಲವಾರು ಪ್ರಶ್ನೆಗಳು ಮೂಡಿವೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande